ಕರ್ನಾಟಕ ರಾಜ್ಯ ಮೀಸಲು ಪಡೆ (ಕೆಎಸ್‌ಆರ್‌ಪಿ) ರಜೆ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಲು ಹಿರಿಯ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಎಡಿಜಿಪಿಗೆ ಸಿಬ್ಬಂದಿಯೊಬ್ಬರು ದೂರು ನೀಡಿದ್ದಾರೆ. ಆ ದೂರಿನ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕೂಡ್ಲುನಲ್ಲಿರುವ 9ನೇ ಕೆಎಸ್‌ಆರ್‌ಪಿ ತುಕಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿ. ಓಂಕಾರಪ್ಪ ಅವರು ಐದು ಮಂದಿ ಮೇಲಾಧಿಕಾರಿಗಳ ವಿರುದ್ಧ 11 ಅಂಶಗಳನ್ನು ಉಲ್ಲೇಖಿಸಿ, ಕೆಎಸ್‌ಆರ್‌ಪಿ ಎಡಿಜಿಪಿಗೆ ದೂರು ಸಲ್ಲಿಸಿದ್ದಾರೆ. ಕೆಎಸ್‌ಆರ್‌ಪಿಯ ಕೆಲವು ಹಿರಿಯ ಅಧಿಕಾರಿಗಳು ಕೆಳ ಹಂತದ ಅಧಿಕಾರಿಗಳಿಂದಲೇ ಲಂಚ ಪಡೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
‘ಹೆಚ್ಚಿನ ರಜೆ ಬೇಕಾದಲ್ಲಿ ಹಣ ನೀಡಬೇಕು. ರಜೆಯಲ್ಲಿದ್ದರೆ ಪ್ರತಿ ದಿನಕ್ಕೆ 500ರಂತೆ ಹಣ ನೀಡಬೇಕು, ಹಣದ ಜತೆಗೆ ಖಾಲಿ ಹಾಳೆ ಮೇಲೆ ಸಹಿ ಮಾಡಿಸಿಕೊಳ್ಳುತ್ತಾರೆ. ಹಣ ಕೊಡದಿದ್ದರೆ ಪರೇಡ್ ಮಾಡಿಸಿ ಕಿರುಕುಳ ನೀಡುತ್ತಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಣ ಪಡೆದು ಕೆಲವು ಸಿಬ್ಬಂದಿಗೆ ಊರಿನಲ್ಲಿರಲು ಅವಕಾಶ ನೀಡಿದ್ದಾರೆ ಎಂದು ಓಂಕಾರಪ್ಪ ನಾಲ್ಕು ಪುಟಗಳ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಪತ್ರದ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


