ಬೆಂಗಳೂರು: ಬೆಂಗಳೂರಿನ ಬಿದರಹಳ್ಳಿ ಗ್ರಾಮಕ್ಕೆ 72 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಲಿಂಬಾವಳಿ ಹೇಳಿದ್ದಾರೆ.
ಬಿದರಹಳ್ಳಿ ಗ್ರಾಮ ಪಂಚಾಯತಿ ಸಭೆಯಲ್ಲಿ ಅವರು ಮಾತನಾಡಿದರು. ಈ ಗ್ರಾಮ ಪಂಚಾಯತಿಯು ಒಟ್ಟು 8 ಗ್ರಾಮಗಳನ್ನು ಒಳಗೊಂಡಿದ್ದು, ಈ ಹಿಂದೆ ಕ್ಷೇತ್ರದ ಶಾಸಕರಾಗಿದ್ದ ಅರವಿಂದ ಲಿಂಬಾವಳಿ ಅವರು ಕಳೆದ ಅವಧಿಯಲ್ಲಿ ಗ್ರಾಮಗಳ ಅಭಿವೃದ್ಧಿಗೆ 72 ಕೋಟಿ ರೂ. ಗಳ ಅನುದಾನ ಬಿಡುಗಡೆ ಮಾಡಿದ್ದು ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು. ಆದಷ್ಟು ಶೀಘ್ರವಾಗಿ ಆ ಕಾಮಗಾರಿಗಳೆಲ್ಲ ಪೂರ್ಣಗೊಳ್ಳಲಿವೆ ಎಂದು ಶಾಸಕಿ ಮಂಜುಳಾ ಲಿಂಬಾವಳಿ ತಿಳಿಸಿದರು.
ಬೆಂಗಳೂರಿನ ಬಿದರಹಳ್ಳಿಯಲ್ಲಿ 2023-24 ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆ ನಡೆಸಲಾಯಿತು. ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಹಳ್ಳಿ ಗ್ರಾಮ ಪಂಚಾಯತಿ ಬಳಿ ಶಾಲಾ ಆವರಣದಲ್ಲಿ ಹಮ್ಮಿಕೊಂಡ ಬಿದರಹಳ್ಳಿ ಗ್ರಾಮ ಪಂಚಾಯತಿಯ 2023-24 ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆಯಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ನಿರ್ವಾಹಣಾಧಿಕಾರಿಗಳಾದ ವಸಂತಕುಮಾರ್, ಬಿದರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಾಜೇಶ್, ಉಪಾಧ್ಯಕ್ಷರಾದ ಶ್ರೀಮತಿ ಸುಜಾತಾ ಸೇರಿದಂತೆ ಪಂಚಾಯತಿ ಸದಸ್ಯರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


