ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಆರಂಭದಿಂದಲೂ ಗೋಚರಿಸುತ್ತಿದ್ದು, ಬಿ. ಕೆ. ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಸಿಂಗಾಪೂರ್ ಕಾರ್ಯತಂತ್ರದ ಕಥೆ ಹೇಳಿದ್ದಾರೆ. ಈ ಸರ್ಕಾರಕ್ಕೆ ಬಾಲಗೃಹ ಪೀಡೆ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮೊದಲ ದಿನದಿಂದ ಎಲ್ಲವೂ ಸರಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಸ್ಪಷ್ಟ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡಿರುವ ವಿಧಾನ, ಸೀಕ್ರೆಟ್ ಬ್ಯಾಲೆಟ್ ಬಳಕೆ ಮಾಡಿರುವುದು ಬಹುಮತ ಇದ್ದರೂ ಇಷ್ಟು ಸರ್ಕಸ್ ಮಾಡಿದ್ದು ಎಲ್ಲವೂ ಸರಿ ಇಲ್ಲ ಅಂತ ಆರ್ಥವಾಗುತ್ತದೆ.
ಸಿದ್ದರಾಮಯ್ಯ ಗ್ಯಾರೆಂಟಿಗಳಿಗೆ ಹಣ ನೀಡುವ ಸಲುವಾಗಿ ಅಭಿವೃದ್ಧಿಗೆ ಅನುದಾನ ಇಲ್ಲ ಅಂತ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಶಾಸಕರೇ ಬಹಿರಂಗವಾಗಿಯೇ ಹೇಳಿದ್ದಾರೆ. ಸಚಿವರುಗಳ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಆದರೆ, ಸಿದ್ದರಾಮಯ್ಯ ಅರ್ಧ ಸತ್ಯ ಎಂದರು. ಉಪ-ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಅವರ ಪಕ್ಷದ ನಾಯಕ ಬಿ. ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆಯಿಂದ ಆಗಿರುವ ಡ್ಯಾಮೆಜ್ ಕಂಟ್ರೋಲ್ ಮಾಡಲು ಸಿಂಗಪುರ ತಂತ್ರದ ಬಗ್ಗೆ ಹೇಳಿದ್ದಾರೆ. ಸ್ವತಃ ಡಿ.ಕೆ ಶಿವಕುಮಾರ್ ಅವರು ಮುಂದೆ ಅವರು ತಾವು ಮಾಡುವ ಕಾರ್ಯತಂತ್ರದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಇದು ಅವರಲ್ಲಿಯೆ ಸಮಾಧಾನ ಇಲ್ಲ ಎನ್ನುವುದು ತೋರಿಸಿದ್ದಾರೆ. ಬಿಜೆಪಿಯ ಹೈಕಮಾಂಡ್ ಈ ಸರ್ಕಾರ ಅಸ್ಥಿರಗೊಳಿಸುವ ಬಗ್ಗೆ ಆಲೋಚಿಸಿಲ್ಲ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


