ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿಗೆ ಟೆಂಡರ್ ಕೊನೆಗೂ ಸರ್ಕಾರದ ಅಂಗಳಕ್ಕೆ ತಲುಪಿದೆ. ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಮುಂದಿನ ಸಚಿವ ಸಂಪುಟದ ಮುಂದೆ ಗುತ್ತಿಗೆ ಅನುಮೋದನೆ ವಿಷಯ ಮಂಡಿಸಲಿದ್ದಾರೆ.
ನಾಲ್ಕು ಬಾರಿ ಟೆಂಡರ್ ಕರೆದಿದ್ದ ಈ ಬಾಕಿ ಕಾಮಗಾರಿಗೆ ಮಾರ್ಚ್‌ನಲ್ಲೇ ಗುತ್ತಿಗೆದಾರರು ಅಂತಿಮಗೊಂಡಿದ್ದರು. ಅವರೊಂದಿಗೆ ಚೌಕಾಸಿ ಮಾಡುವ ಪ್ರಕ್ರಿಯೆಗೆ ಬಿಬಿಎಂಪಿ ಅಧಿಕಾರಿಗಳು ಅಧಿಕ ಸಮಯ ತೆಗೆದುಕೊಂಡಿದ್ದರು. ಈ ವಿಳಂಬ ನೀತಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೂ ಆಕ್ರೋಶಗೊಂಡಿದ್ದರು.
ಬಿಬಿಎಂಪಿ ಅಧಿಕಾರಿಗಳು ಕೊನೆಗೂ ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿಗೆ ಟೆಂಡರ್ ಮೊತ್ತಕ್ಕಿಂತ ಶೇ 18. 30ರಷ್ಟು ಹೆಚ್ಚಿನ ಮೊತ್ತಕ್ಕೆ ಗುತ್ತಿಗೆದಾರರ ಮನವೊಲಿಸಿದ್ದಾರೆ. ಜುಲೈ 17ರಂದು ಈ ಟೆಂಡರ್ ಅನುಮೋದನೆಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕಳುಹಿಸಿಕೊಟ್ಟಿದ್ದಾರೆ.
‘ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿ ಟೆಂಡರ್ ಅನುಮೋದನೆ ಸರ್ಕಾರಕ್ಕೆ ಬಂದಿದೆ. ಈ ಮುಂದಿನ ಸಚಿವ ಸಂಪುಟದ ಮುಂದೆ ಅದನ್ನು ತರುವಂತೆ ರಾಕೇಶ್ ಸಿಂಗ್ ಅವರಿಗೆ ಸೂಚಿಸಲಾಗಿದೆ. ಅಲ್ಲಿ ಅನುಮೋದನೆಗೊಂಡ ಕೂಡಲೇ ಕಾಮಗಾರಿ ಆರಂಭಿಸಲಾಗುತ್ತದೆ. ಟರ್ನ್‌ಕೀ ಗುತ್ತಿಗೆಯಲ್ಲಿ ಈ ಕಾಮಗಾರಿಯನ್ನು 12 ತಿಂಗಳಲ್ಲಿ ಮುಗಿಸಲಾಗುತ್ತದೆ’ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


