nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

    May 15, 2026

    ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ

    May 15, 2026
    Facebook Twitter Instagram
    ಟ್ರೆಂಡಿಂಗ್
    • ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
    • ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
    • ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
    • ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
    • ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
    • ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
    • ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
    • ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೊಲ್ಲರಹಟ್ಟಿಯಲ್ಲಿ ಶಿಶುವಿನ ಸಾವನ್ನು ಸಾವು ಎನ್ನಬೇಕೋ? ಕೊಲೆ ಎನ್ನಬೇಕೋ?
    ಲೇಖನ July 26, 2023

    ಗೊಲ್ಲರಹಟ್ಟಿಯಲ್ಲಿ ಶಿಶುವಿನ ಸಾವನ್ನು ಸಾವು ಎನ್ನಬೇಕೋ? ಕೊಲೆ ಎನ್ನಬೇಕೋ?

    By adminJuly 26, 2023No Comments2 Mins Read
    gollarahatti
    • ಗಣೇಶ್ ಕೆ.ಪಿ., ಪುತ್ತೂರು

    ತುಮಕೂರು ತಾಲೂಕು ಮಲ್ಲೇನಹಳ್ಳಿಯ ಗೊಲ್ಲರಹಟ್ಟಿಯಲ್ಲಿ ಬಾಣಂತಿ, ಮಗುವನ್ನ ಊರ ಹೊರಗಿಟ್ಟಿದ್ದ ಘಟನೆ ಸಾಕಷ್ಟು ಮಾಧ್ಯಮಗಳಲ್ಲಿ ವರದಿಯಾಗಿತ್ತು.  ಅಧಿಕಾರಿಗಳ ಗಮನಕ್ಕೂ ಬಂದಿತ್ತು. ಇಷ್ಟಾಗಿದ್ದರೂ ತಾಯಿ ಮತ್ತು ಮಗುವಿನ ರಕ್ಷಣೆಗೆ ಮುಂದಾಗದೇ ಇರುವುದು ಜಿಲ್ಲಾಡಳಿತ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿಯಾಗಿದೆ. ಇದೀಗ ಮಗು ಸಾವನ್ನಪ್ಪಿದ್ದು, ಇದನ್ನು ಸಾವು ಎನ್ನಬೇಕೋ, ಕೊಲೆ ಎನ್ನಬೇಕೋ? ಎನ್ನುವ ಪ್ರಶ್ನೆಗೆ ಜಿಲ್ಲಾಡಳಿತ ಉತ್ತರಿಸಬೇಕಿದೆ.

    ಮಹಿಳೆಯರನ್ನು ನಿಕೃಷ್ಟವಾಗಿ ಕಾಣುವ ಆಚರಣೆಗಳು ಈ ಸಮುದಾಯದಲ್ಲಿದೆ. ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಸರಿಯಾದ ಕಾನೂನು ಕ್ರಮಕೈಗೊಳ್ಳದೇ ಇರುವುದರಿಂದ ಇಂದಿಗೂ ಈ ಸಾಮಾಜಿಕ ಪಿಡುಗು ಕಾಡುಗೊಲ್ಲ ಸಮುದಾಯ ಮಹಿಳೆಯರನ್ನು ಪ್ರಾಣಿಗಿಂತಲೂ ಹೀನವಾಗಿ ಕಾಣುವಂತಹ ಸಂದರ್ಭವನ್ನು ಸೃಷ್ಟಿಸಿದೆ.


    Provided by
    Provided by

    ಮಹಿಳೆ ಹಾಗೂ ನವಜಾತ ಶಿಶುವನ್ನು ಹೊರಗೆ ಇಟ್ಟಿರುವ ವಿಚಾರದ ಬಗ್ಗೆ “ನಮ್ಮತುಮಕೂರು” ಮಾಧ್ಯಮ ಸವಿವರವಾದ ವರದಿಯನ್ನು ಪ್ರಕಟಿಸಿತ್ತು. ಈ ವರದಿ ಇಡೀ ರಾಜ್ಯದಲ್ಲೇ ಸಂಚಲನವನ್ನು ಸೃಷ್ಟಿಸಿತ್ತು. ರಾಜ್ಯದಲ್ಲಿ ವ್ಯಾಪಕವಾಗಿ ಈ ಘಟನೆ ಟೀಕೆಗೆ ಗುರಿಯಾಗಿತ್ತು. ಇಷ್ಟೆಲ್ಲ ನಡೆದರೂ ಆ ಮಹಿಳೆ ಹಾಗೂ ಮಗುವಿನ ರಕ್ಷಣೆಗೆ ತುಮಕೂರು ಜಿಲ್ಲಾಡಳಿತ ಮುಂದಾಗದೇ ಇರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ.

    ನವಜಾತ ಶಿಶು ಹಾಗೂ ಬಾಣಂತಿ ಮಹಿಳೆ ತನ್ನ ಗಂಡನ ಮನೆಯಲ್ಲಿ ಬೆಚ್ಚಗಿನ ಮನೆಯೊಳಗೆ ಆರೈಕೆ ಪಡೆಯಬೇಕಿತ್ತು. ಆದರೆ ಗ್ರಾಮಸ್ಥರು ಇಲ್ಲಿನ ದೇವರಿಗೆ ಸೂತಕದವರು ಒಳಗೆ ಬಂದರೆ ಆಗುವುದಿಲ್ಲ ಎಂಬ ಕಾರಣ ನೀಡಿ, ಗುಡಿಸಲೊಂದರಲ್ಲಿ ಮಹಿಳೆ ಮತ್ತು ಶಿಶುವನ್ನು ಪ್ರಾಣಿಗಿಂತಲೂ ಹೀನಾಯವಾಗಿ ಕೂಡಿಟ್ಟ ಸ್ಥಿತಿಯಲ್ಲಿಟ್ಟು ಆ ಶಿಶುವಿನ ಸಾವಿಗೆ ಕಾರಣವಾಗಿದ್ದಾರೆ. ಇಷ್ಟಾದರೂ ಘಟನೆಗೆ ಕಾರಣವಾದವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಬಾಣಂತಿ ಹಾಗೂ ಶಿಶುವನ್ನು ಊರ ಹೊರಗೆ ಇಟ್ಟು ಶಿಶುವಿನ ಮರಣಕ್ಕೆ ಕಾರಣವಾಗಿರುವುದು ಕೊಲೆಗೆ ಸಮಾನವಾದ ಕೃತ್ಯವಾಗಿದೆ. ಈ ಘಟನೆಗೆ ಕಾರಣರಾದವರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ಕೊಲೆ ಹಾಗೂ ಮಹಿಳಾ ದೌರ್ಜನ್ಯದಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕಿದೆ.

    ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲೇ ಇಂತಹದ್ದೊಂದು ಘಟನೆಯಾಗಿದೆ. ಬಾಣಂತಿ ಹಾಗೂ ನವಜಾತ ಶಿಶು ಅಸಹಾಯಕವಾಗಿದ್ದಾರೆ ಎನ್ನುವುದು  ರಾಜ್ಯಾದ್ಯಂತ ಸುದ್ದಿಯಾಗಿದ್ದರೂ ಸಚಿವರಿಗೆ ಹಾಗೂ ಸಂಬಂಧಪಟ್ಟ ಇಲಾಖೆಗೆ ತಿಳಿದಿಲ್ಲವೇ? ಇನ್ನಾದರೂ ಈ ಶಿಶುವಿನ ಸಾವಿಗೆ ಕಾರಣವಾದವರ ಮೇಲೆ ಕೇಸು ದಾಖಲಿಸಿ, ಮುಂದೆ ಇಂತಹ ಘಟನೆಯಾಗದಂತೆ ಹಾಗೂ ಕಾಡುಗೊಲ್ಲ ಸಮುದಾಯದ ಮಹಿಳೆಯರಿಗೆ ಸಾಮಾಜಿಕ ನ್ಯಾಯ ಒದಗಿಸಲು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಮುಂದಾಗುತ್ತದೆಯೇ? ತುಮಕೂರು ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯಾಗಿದೆ.

    10 ದಿನಗಳ ಹೆಣ್ಣು ಮಗು ದೊಡ್ಡವರ ಅಜ್ಞಾನಕ್ಕೆ ಬಲಿಯಾಗಿದೆ. ಮಕ್ಕಳಲ್ಲಿ ದೇವರನ್ನು ಕಾಣುವ ಬಸವಣ್ಣ ನಾಡಿನಲ್ಲಿ ಇಂತಹ ಅನಿಷ್ಠ ಸಂಪ್ರದಾಯ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಬಾಣಂತಿ ಮಹಿಳೆ ಊರಿನ ಒಳಗೆ ಬಂದ್ರೆ ದೇವರಿಗೆ ಆಗೋದಿಲ್ಲ ಎನ್ನುವುದಾಗಿದ್ದರೆ, ದೇವರನ್ನು ಊರಿನ ಹೊರಗಿಟ್ಟು ಪೂಜೆ ಮಾಡಿ, ಬಾಣಂತಿಯರನ್ನು ಊರಿನೊಳಗೆ ಕರೆದುಕೊಂಡು ಬಂದು ಅವರ ರಕ್ಷಣೆ ಮಾಡಬೇಕಿರುವುದು ಜಿಲ್ಲಾಡಳಿತ ಆಗಿದೆ. ಇನ್ನಾದರೂ ಸರ್ಕಾರ ಈ ಬಗ್ಗೆ ಇಚ್ಛಾಶಕ್ತಿ ಪ್ರದರ್ಶಿಸಬೇಕಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ

    May 10, 2026

    ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ

    May 9, 2026

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ಚಿಕ್ಕನಾಯಕನಹಳ್ಳಿ: ಎಸ್‌ ಎಸ್‌ ಎಲ್‌ ಸಿಯಲ್ಲಿ ವಿದ್ಯಾರ್ಥಿಗಳು ಅಧಿಕ ಅಂಕಗಳನ್ನು ಪಡೆಯುವಂತೆ ಪ್ರೇರೇಪಿಸಿದ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಮೇ 16…

    ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

    May 15, 2026

    ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ

    May 15, 2026

    ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ

    May 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.