ಹೆಣ್ಣೂರಿನ ವಿನ್ಸೆಂಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯು ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಾರ್ವೇಶ್ ಸಾವವನ್ನಪ್ಪಿದ ವಿದ್ಯಾರ್ಥಿ.
ಮಂಗಳವಾರ ಬೆಳಗ್ಗೆ ಎಂದಿನಂತೆ ಕಾಲೇಜಿಗೆ ಹೋಗಿದ್ದ ಮಾರ್ವೇಶ್ ಮನೆಗೆ ಬಂದಿರಲಿಲ್ಲ. ಇದರಿಂದ ಪೋಷಕರು ಆತಂಕದಲ್ಲಿದ್ದರು. ಈ ವೇಳೆ ಸ್ನೇಹಿತನೋರ್ವ ಮನೆಗೆ ಬಂದು ವಿಚಾರಿಸಿ ಹೋಗಿದ್ದ. ಅನಂತರ ನಿನ್ನೆ ರಾತ್ರಿ ಜಿಹಾನ್ ಆಸ್ಪತ್ರೆಗೆ ಸುನಿಲ್ ಎಂಬಾತ ಮಾರ್ವೇಶ್ ನನ್ನ ಚಿಕಿತ್ಸೆ ಕರೆತಂದಿದ್ದ. ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದ ಎಂದು ವೈದ್ಯರು ಖಚಿತಪಡಿಸಿ ಹೆಣ್ಣೂರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಬಂದು ಪರಿಶೀಲಿಸಿದ ಪೊಲೀಸರು ಆಸ್ಪತ್ರೆಗೆ ಸೇರಿಸಿದ ಸುನಿಲ್ ಎಂಬಾತನನ್ನ ವಿಚಾರಿಸಿದಾಗ ಯಾರೋ ಅಪರಿಚಿತರು ಲಿಂಗರಾಜಪುರ ಬಳಿ ಮಾರ್ವೇಶ್ ನನ್ನ ಒಪ್ಪಿಸಿದ್ದರು. ಹೀಗಾಗಿ ಆಸ್ಪತ್ರೆಗೆ ಸೇರಿಸಿದ್ದೇನೆ ಎಂದು ಹೇಳಿಕೆ ನೀಡಿದ್ದ. ಮತ್ತೊಂದೆಡೆ ಪೋಷಕರು ಸಹ ನಿನ್ನೆ ಸಂಜೆ ಮನೆ ಬಳಿ ಮಾರ್ವೇಶ್ ಬಗ್ಗೆ ವಿಚಾರಿಸಿದ್ದ ವ್ಯಕ್ತಿ ಬಗ್ಗೆ ಅನುಮಾನವಿದ್ದು ಆತನ ವಶಕ್ಕೆ ಪಡೆದು ವಿಚಾರಿಸಿದಾಗ ಸತ್ಯ ಗೊತ್ತಾಗಲಿದೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


