ತುಮಕೂರು: ಸಂಪನ್ಮೂಲ ಕೊರತೆಯಿಂದ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಹಿನ್ನಡೆಯಾಗಿತ್ತು ಹೀಗಾಗಿ ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಹೋಬಳಿ ಮಟ್ಟಕ್ಕೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾಗುವುದು ಇದಕ್ಕಾಗಿ ಸರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಎಂಟು ವರ್ಷಗಳ ಅಧಿಕಾರ ನಡೆಸಿರುವ ಮಾದರಿಯ ಆಡಳಿತ ಕುರಿತು ರಾಜ್ಯದಲ್ಲಿ ಜನಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ದೆಹಲಿ ಸರ್ಕಾರದಲ್ಲಿ ಕೇಜ್ರಿವಾಲ್ ಅವರ ಯೋಜನೆಗಳನ್ನು ಕದ್ದು ರಾಜ್ಯದಲ್ಲಿ ಕಾಂಗ್ರೆಸ್ ಅನುಷ್ಠಾನಗೊಳಿಸಿರುವಂತಹ, ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೂ ಅನುಷ್ಠಾನಕ್ಕೆ ಸುಳ್ಳು ಹೇಳಿರುವಂತಹುದು ಸ್ಪಷ್ಟವಾಗಿದೆ ಎಂದು ತಿಳಿಸಿದರು.
ಈ ಹಿಂದಿನ ಸರ್ಕಾರದಲ್ಲಿ 40 ಪರ್ಸೆಂಟ್ ಸರ್ಕಾರ ಎಂದು ದೂರಿದ ಕಾಂಗ್ರೆಸ್ಸಿಗರು ಇದೀಗ ಯಾವುದೇ ಬಿಲ್ ಗಳು ಇಲ್ಲದೆ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಪರೀತ ಸಾಲ ಮಾಡಿದೆ ಈ ಮೂಲಕ ಜನರ ಮೇಲೆ ಇದರ ಹೊರೆಯನ್ನು ಹೊರಿಸುವೆ ಇದು ಒಂದು ರೀತಿ ಬಡ್ಡಿ ಮಕ್ಕಳ ಸರ್ಕಾರವಾಗಿದೆ ಎಂದು ಟೀಕಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA