ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರಿಗೆ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯದ ಮುಖಂಡರಿಗೆ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದು, ಬುಲಾವ್ ಹಿನ್ನೆಲೆಯಲ್ಲಿ ಆಗಸ್ಟ್ 2 ರಂದು ದೆಹಲಿಗೆ ರಾಜ್ಯದ ನಾಯಕರು ತೆರಳಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಭಾಗಿಯಾಗಲು ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿದಂತೆ ಹಲವರು ತೆರಳಲಿದ್ದಾರೆ. ಸಚಿವ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿರುವ ಪರಿಷತ್ ಸದಸ್ಯ ಹರಿಪ್ರಸಾದ್ ಕೂಡ ಸಭೆಗೆ ಆಹ್ವಾನ ನೀಡಿದ್ದು ಕುತೂಹಲ ಕೆರಳಿಸಿದೆ. ಅಂದೇ ಸಚಿವ ಸಂಪುಟದ ಎಲ್ಲ ಸದಸ್ಯರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿಯಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


