ಕಲಬುರಗಿ: ಬುರ್ಖಾ ಧರಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರನ್ನ ಬಸ್ ಹತ್ತಲು ಬಿಡದ ಬಸ್ ಚಾಲಕನನ್ನ ಅಮಾನತುಗೊಳಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಹಿಜಬ್‌ದಾರಿ ಶಾಲಾ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಬಸ್ ಚಾಲಕನನ್ನ ಅಮಾನತುಗೊಳಿಸಲಾಗಿದೆ.
ಕಲಬುರಗಿ ಬಸ್ ಡಿಪೋ-3ರ ಚಾಲಕ ಮೆಹಬೂಬ್ ಪಟೇಲ್ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೇ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ KKRTC ಕಲಬುರಗಿ ವಿಭಾಗದ ಡಿಸಿ ಚಾಲಕನನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಎರಡು ದಿನಗಳ ಹಿಂದೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಓಕಳಿ ಗ್ರಾಮದ ಬಳಿ ಹಿಜಬ್‌ದಾರಿ ವಿದ್ಯಾರ್ಥಿನಿಯರು ತಮ್ಮೂರಿಗೆ ಹೊರಟಿದ್ದರು. ಈ ವೇಳೆ ಚಾಲಕ ನೀನು ಮುಸ್ಲಿಂ ಇದಿಯಲ್ವ.. ಬುರ್ಖಾ ಧರಿಸಿ ಬಾ.. ಆಗ ಮಾತ್ರ ಬಸ್ ಹತ್ತಲು ಬಿಡುತ್ತೇನೆ ಎಂದು ಹೇಳಿದ್ದ. ಆಗ ಶಿಕ್ಷಕರು ಮತ್ತು ಬಸ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


