nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 13, 2026

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ
    • ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ
    • ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
    • ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ
    • ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
    • ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿವೃಷ್ಟಿ ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ: ಅಂಜುಮ್ ಪರ್ವೇಜ್
    ಜಿಲ್ಲಾ ಸುದ್ದಿ July 29, 2023

    ಅತಿವೃಷ್ಟಿ ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ: ಅಂಜುಮ್ ಪರ್ವೇಜ್

    By adminJuly 29, 2023No Comments3 Mins Read
    belagavi

    ಬೆಳಗಾವಿ: ನದಿಗಳ ಒಳಹರಿವು, ಮಳೆಯ ಪ್ರಮಾಣ, ಜಲಾಶಯ ಮಟ್ಟ ಮತ್ತು ಮಹಾರಾಷ್ಟದಿಂದ ಬಿಡುವ ನೀರಿನ ಪ್ರಮಾಣ ಇವುಗಳ ಮೇಲೆ ನಿಗಾವಹಿಸುವುದರಿಂದ ಅತ್ಯಂತ ವೈಜ್ಞಾನಿಕವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರವಾಹ ನಿರ್ವಹಣೆಯನ್ನು ಮಾಡಬಹುದು. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇವುಗಳ ಮೇಲೆ ನಿಗಾ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ತಿಳಿಸಿದರು.

    ಅತಿವೃಷ್ಟಿಯಿಂದ ಬಾಧಿತಗೊಂಡಿರುವ ಗ್ರಾಮಗಳು ಮತ್ತು ಕಾಳಜಿ ಕೇಂದ್ರಕ್ಕೆ ಗುರುವಾರ(ಜು.27) ಭೇಟಿ ನೀಡಿದ ಬಳಿಕ ಚಿಕ್ಕೋಡಿಯ ಲೋಕೋಪಯೋಗಿ ಇಲಾಖೆಯ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    Provided by
    Provided by

    ಮಳೆಯ ಪ್ರಮಾಣ ಮತ್ತು ಮಹಾರಾಷ್ಟ್ರದಿಂದ ನೀರು ಬಿಡುಗಡೆ ಕುರಿತು ಅಲ್ಲಿಯ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದುಕೊಂಡು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು. ಪ್ರವಾಹದಿಂದ ಉಂಟಾಗುವ ಮನೆಹಾನಿಯ ಸಮೀಕ್ಷೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಇದಲ್ಲದೇ ಮಾನವ ಜೀವಹಾನಿ ಹಾಗೂ ಪ್ರಾಣಿಗಳ ಜೀವಹಾನಿಯಾದಾಗ ತುರ್ತಾಗಿ ಪರಿಹಾರಧನವನ್ನು ನೀಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

    ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಪ್ರವಾಹದ ಸಂದರ್ಭದಲ್ಲಿ ಸ್ಥಳೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಮೂಲಕ ಪ್ರವಾಹ ಪರಿಸ್ಥಿತಿಯ ಸಮರ್ಪಕ ನಿರ್ವಹಣೆಗೆ ಕೈಜೋಡಿಸಬೇಕು ಎಂದು ತಿಳಿಸಿದರು.

    ಪ್ರವಾಹ ಹಾನಿ ತಡೆಗಟ್ಟಲು ಆದ್ಯತೆ ನೀಡಬೇಕು:

    ಪ್ರವಾಹದ ಬಳಿಕ ಪುನರ್ವಸತಿ ಕಲ್ಪಿಸುವುದರ ಬದಲಾಗಿ ಮುಂಚಿತವಾಗಿಯೇ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆದ್ಯತೆ ನೀಡಬೇಕು. ಪಿಡಿಓ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಸೇರಿದಂತೆ ಸ್ಥಳೀಯ ಅಧಿಕಾರಿಗಳು ಪ್ರತಿಯೊಂದು ಗ್ರಾಮಗಳಿಗೆ ಭೇಟಿ ನೀಡಿ ಶಿಥಿಲಗೊಂಡಿರುವ ಮನೆಗಳನ್ನು ಪರಿಶೀಲಿಸಿ ಕುಟುಂಬಗಳಿಗೆ ಈ ಬಗ್ಗೆ ಎಚ್ಚರಿಕೆ ನೀಡಬೇಕು. ಸಾಧ್ಯವಿರುವ ಕಡೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    2019 ರಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ ಕುರಿತು ಸಮರ್ಪಕವಾಗಿ ದತ್ತಾಂಶ ದಾಖಲೆಯಾಗಿರಲಿಲ್ಲ. ಆದ್ದರಿಂದ ಮನೆಹಾನಿಗಿರುವುದಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ಕೈಗೊಂಡಾಗ ಕೆಟಗರಿವಾರು ನಿಖರ ಮಾಹಿತಿಯನ್ನು ಒದಗಿಸಬೇಕು ಎಂದು ಸಲಹೆ ನೀಡಿದರು.

    ಅತಿವೃಷ್ಟಿ ಹಾಗೂ ಪ್ರವಾಹದ ಬಳಿಕ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಆದ್ದರಿಂದ ನೀರು ಕಡಿಮೆಯಾದ ಬಳಿಕ ಪ್ರವಾಹದಿಂದ ಬಾಧಿತಗೊಂಡಿರುವ ಪ್ರತಿಯೊಂದು ಗ್ರಾಮಗಳಲ್ಲಿ ಸ್ವಚ್ಚತಾ ಕಾರ್ಯವನ್ನು ಕೈಗೊಳ್ಳಬೇಕು. ಕಂದಾಯ, ಗ್ರಾಮೀಣಾಭಿವೃದ್ಧಿ ಹಾಗೂ ಪೊಲೀಸ್ ಈ ಮೂರು ಇಲಾಖೆಗಳ ಸಮನ್ವಯತೆ ಬಹಳ ಪ್ರಮುಖವಾಗಿರುತ್ತದೆ. ಆದ್ದರಿಂದ ಈ ಕುರಿತು ಗಮನಹರಿಸಬೇಕು ಎಂದು ತಿಳಿಸಿದರು.

    ಮರುಬಿತ್ತನೆಗೆ ಬೀಜ ಪೂರೈಕೆಗೆ ಸೂಚನೆ:

    ಈಗಾಗಲೇ ಬಿತ್ತನೆ ಮಾಡಿ ಬೆಳೆ ಹಾನಿಯಾಗಿರುವುದರಿಂದ ಕೆಲ ರೈತರು ಮತ್ತೊಮ್ಮೆ ಬಿತ್ತನೆ ಬೀಜ ಒದಗಿಸುವಂತೆ ಕೋರುತ್ತಿದ್ದಾರೆ. ಆದ್ದರಿಂದ ಅಂತಹ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜಗಳನ್ನು ಒದಗಿಸಬೇಕು ಎಂದು ಅಂಜುಮ್ ಪರ್ವೇಜ್ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

    ಜಿಲ್ಲೆಯಲ್ಲಿ ಶೇ.100 ರಷ್ಟು ಬಿತ್ತನೆ ಆಗಬೇಕು. ಯಾವುದೇ ಕಾರಣಕ್ಕೂ ರೈತರಿಗೆ ಬೀಜ ಪೂರೈಕೆಯಲ್ಲಿ ತೊಂದರೆಯಾಗಬಾರದು. ಆದ್ದರಿಂದ ಅಗತ್ಯ ಬೀಜ-ಗೊಬ್ಬರಗಳ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಹೇಳಿದರು.

    ಬಿತ್ತನೆ ಬೀಜ-ಗೊಬ್ಬರ ಪೂರೈಕೆಗೆ ಕ್ರಮ-ಜಿಲ್ಲಾಧಿಕಾರಿ ನಿತೇಶ್ ಪಾಟೀಲ:

    ಸದ್ಯಕ್ಕೆ 1.61 ಲಕ್ಷ ಕ್ಯೂಸೆಕ್ ನೀರು ಆಲಮಟ್ಟಿ ಜಲಾಶಯದ ಒಳಹರಿವು ಇದೆ. 2.50 ಲಕ್ಷ ಕ್ಯೂಸೆಕ್ ಒಳಹರಿವು ಇದ್ದರೆ ಮಾತ್ರ ಪ್ರವಾಹ ಭೀತಿ ಎದುರಾಗುತ್ತದೆ. ಸದ್ಯಕ್ಕೆ ಅಷ್ಟೊಂದು ಒಳಹರಿವು ಇರುವುದಿಲ್ಲ. ಆದ್ದರಿಂದ ಪ್ರವಾಹ ಭೀತಿ ಸದ್ಯಕ್ಕಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

    ಜಿಲ್ಲೆಯಲ್ಲಿ 30 ಕೆಳಹಂತದ ಸೇತುವೆಗಳು ಮುಳುಗಡೆಯಾಗಿವೆ. ಎಲ್ಲ ಕಡೆ ಪರ್ಯಾಯ ಮಾರ್ಗಗಳಿವೆ. ಆದಾಗ್ಯೂ ಮುಖ್ಯಮಂತ್ರಿಗಳು ನೀಡಿರುವ ಸೂಚನೆ ಮೇರೆಗೆ ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದರು.

    ಮಣ್ಣಿನ ಮನೆಗಳು ಕುಸಿಯುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಇಂತಹ ಮನೆಗಳಲ್ಲಿ ವಾಸಿಸುವ ಕುಟುಂಬಗಳು ಸುರಕ್ಷಿತ ಮನೆಗಳಲ್ಲಿ ವಾಸಿಸಬೇಕು ಎಂದು ಪ್ರತಿಯೊಂದು ಪಂಚಾಯಿತಿಗಳಲ್ಲಿ ಡಂಗುರದ ಮೂಲಕ ಅರಿವು ಮೂಡಿಸಲಾಗುತ್ತಿದೆ.

    ಇತ್ತೀಚಿನ ಮಳೆಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿರುತ್ತದೆ ಎಂದು ತಿಳಿಸಿದರು. ಬಿತ್ತನೆ ಬೀಜ ಹಾಗೂ ಗೊಬ್ಬರಗಳ ಸಮರ್ಪಕ ದಾಸ್ತಾನು ಇರುತ್ತದೆ. ರೈತರ ಬೇಡಿಕೆಯ ಪ್ರಕಾರ ತಕ್ಷಣವೇ ಪೂರೈಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

     

    admin
    • Website

    Related Posts

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತಿಪಟೂರು: ಟ್ಯೂಷನ್ ಗೆ ಹೋಗಿದ್ದ ಬಾಲಕ ನಾಪತ್ತೆಯಾಗಿದ್ದ  ಪ್ರಕರಣ ಸುಖಾಂತ್ಯವಾಗಿದ್ದು, ಕೊನೆಗೂ ನಾಪತ್ತೆಯಾಗಿದ್ದ ಬಾಲಕ ತಾಯಿ ಮಡಿಲು ಸೇರಿದ್ದಾನೆ. ಮಾಹಿತಿಗಳ…

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 13, 2026

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.