ತುರುವೇಕೆರೆ: ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಅವಧಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದಿದ್ದು ಕ್ಷೇತ್ರದ 34 ಗ್ರಾಮ ಪಂಚಾಯಿತಿಗಳಲ್ಲಿ 23 ಪಂಚಾಯಿತಿ ಜೆಡಿಎಸ್ ತೆಕ್ಕೆಗೆ ಬಂದಿದೆ ಇದು ನಮಗೆ ಹೆಮ್ಮೆಯ ವಿಚಾರ ಎಂದು ಜೆಡಿಎಸ್ ವಕ್ತಾರ ವೆಂಕಟಪುರ ಯೋಗೀಶ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆವರು ಇದು ನಮ್ಮ ಕ್ಷೇತ್ರದ ಜನಪ್ರಿಯ ಶಾಸಕರಾದ ಎಂ ಟಿ ಕೃಷ್ಣಪ್ಪನವರು ಗ್ರಾಮೀಣ ಭಾಗದ ಜನರನ್ನು ತಲುಪಲು ಸಹಕಾರಿಯಾಗಿದೆ ಎಂದು ಭಾವಿಸಿದ್ದು ಹೀಗೇನು ಎರಡನೇ ಅವಧಿಯ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿಗರು ನಿಷ್ಠಾವಂತರುಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿರುವುದರಿಂದ ಅವರನ್ನೆಲ್ಲ ಗೌರವಿಸಬೇಕು ಉದ್ದೇಶದಿಂದ ಇದೇ ತಿಂಗಳ 31ನೇ ಸೋಮವಾರದಂದು ಬೆಳಗ್ಗೆ 9:30ಕ್ಕೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಜಯಣ್ಣ ಕನ್ವೆನ್ಷನ್ ಹಾಲ್ ನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಪಕ್ಷದ ತಾಲೂಕು ಅಧ್ಯಕ್ಷರಾದ ದೊಡ್ಡೇಗೌಡರು ವಹಿಸಲಿದ್ದು ಕಾರ್ಯಕ್ರಮವನ್ನು ಶಾಸಕರಾದ ಎಂಪಿ ಕೃಷ್ಣಪ್ಪನವರು ಉದ್ಘಾಟಿಸಲಿದ್ದು ಕಾರ್ಯಕ್ರಮಕ್ಕೆ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಜಿಲ್ಲಾಮಟ್ಟದ ನಾಯಕರುಗಳು ತಾಲೂಕು ಮಟ್ಟದ ನಾಯಕರುಗಳು ಭಾಗವಹಿಸಲಿದ್ದಾರೆ ಆದುದರಿಂದ ಈ ಕಾರ್ಯಕ್ರಮವನ್ನು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಬೇಕಾಗಿ ಪಕ್ಷದ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.
ನಂತರ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷರು ದೊಡ್ಡೇಗೌಡ ಮಾತನಾಡಿ ಎರಡನೇ ಬಾರಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಸನ್ಮಾನಿಸುತ್ತಿರುವುದು ಪಕ್ಷದ ಒಳ್ಳೆಯ ಬೆಳವಣಿಗೆಯಾಗಿದೆ ಇದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಯಾಗಲಿದೆ ಹಾಗೂ ಪಕ್ಷ ಸಂಘಟನೆ ಮಾಡಲು ಅವಕಾಶವಾಗಿದೆ ಮಾನ್ಯ ಶಾಸಕರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಆದೇಶ ನೀಡಿದ್ದಾರೆ ಆದುದರಿಂದ ಪಕ್ಷದ ಅಧ್ಯಕ್ಷರಾಗಿ ಜನರನ್ನು ಪಕ್ಷ ಸಂಘಟನೆ ಮಾಡಲು ಸರಿಯಾದ ಸಮಯವಾಗಿದೆ ಎಂದು ಅಭಿಪ್ರಾಯ ಪಟ್ಟರು.
ಪಕ್ಷದ ಪ್ರಧಾನ ಕಾರ್ಯದರ್ಶಿ ಮಧು ಸೊಪ್ಪನಹಳ್ಳಿ ರವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ 23 ಪಂಚಾಯಿತಿಗಳು ಜೆಡಿಎಸ್ ತೆಕ್ಕೆಗೆ ಬಂದಿದ್ದು ಇದು ಶಾಸಕರಾದ ಎಂ.ಟಿ.ಕೃಷ್ಣಪ್ಪನವರ ಆಡಳಿತ ವೈಖರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ. 23 ಪಂಚಾಯಿತಿ ನಮ್ಮ ಪಕ್ಷದ ಗೆಲುವಾಗಿದ್ದು 65 ಪ್ರತಿಶತ, ಗೆಲುವನ್ನು ಪಡೆದಿದ್ದು ಇದು ಮುಂದಿನ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ದಾರಿಯಾಗಲಿದೆ ಶಾಸಕರ ಗೆಲುವಿಗೆ ನೂತನವಾಗಿ ಗೆದ್ದಂತಹ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಶ್ರಮಿಸಿದ್ದಾರೆ ಅವರನ್ನು ಗೌರವಿಸುತ್ತಿರುವುದು ಪಕ್ಷದ ಧ್ಯೇಯವಾಗಿದೆ ಎಂದು ಅಭಿಪ್ರಾಯ , ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಎಡಿಗೆಹಳ್ಳಿ ವಿಶ್ವನಾಥ್, ಗಂಗಾಧರ್, ಪ್ರಕಾಶ್, ಸತೀಶ್ ಮಾವಿನಕೆರೆ ಸೇರಿದಂತೆ ಇತರರು ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA