ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ ಗೆ ಮಾಜಿ ಸಚಿವ ಡಾ. ಕೆ. ಸುಧಾಕರ್, ದೊಡ್ಡ ಸವಾಲೊಂದನ್ನು ಹಾಕಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಸುಧಾಕರ್, ನಿಮಗೆ ತಾಕತ್ ಇದ್ದರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬನ್ನಿ, ನೀವು ಪಕ್ಷೇತರರಾಗಿ ಸ್ಪರ್ಧೆ ಮಾಡಿ, ನಾನು ಕೂಡ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ. ಆಗ ಯಾರು ಜಯಗಳಿಸುತ್ತಾರೆ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಇನ್ನು ಸುಧಾಕರ್ ಸವಾಲಿಗೆ ತಿರುಗೇಟು ಕೊಟ್ಟಿರುವ ಶಾಸಕ ಪ್ರದೀಪ್ ಈಶ್ವರ್, ಚುನಾವಣೆ ನಡೆದು 2 ತಿಂಗಳಾಗಿದೆ. ಕೆಲಸವಿಲ್ಲದೇ ರಾಜೀನಾಮೆ ಏಕೆ ನೀಡಬೇಕು? ನಾನು ನಿಮ್ಮ ತರಹದ ರಾಜಕಾರಣಿ ಚುನಾವಣೆ ಅಲ್ಲ. ಅಂದರೆ, ನಡೆಯುವುದು ಜನರ ತೆರಿಗೆ ಹಣದಿಂದ. ಅದನ್ನು ಸುಖಾಸುಮ್ಮನೆ ಪೋಲು ಮಾಡಲು ನಾನು ಸಿದ್ಧನಾಗಿಲ್ಲ ಎಂದು ಸುಧಾಕರ್ ಗೆ ತಿರುಗೇಟು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


