ಎರಡು ಖಾಸಗಿ ಕಂಪನಿಗಳ ನೌಕರರಿಬ್ಬರ ಹೊಸ ಸಾರಿಗೆಯೇತರ ವಾಹನಗಳನ್ನು ಭಾರತ್ (ಬಿಎಚ್) ಸರಣಿಯಡಿ ನೋಂದಣಿ ಮಾಡುವಂತೆ ಸಾರಿಗೆ ಆಯುಕ್ತರಿಗೆ ಹೈಕೋರ್ಟ್ ಏಕ ಸದಸ್ಯ ಪೀಠ ನಿರ್ದೇಶಿದ್ದ ಕ್ರಮವನ್ನು ವಿಭಾಗೀಯ ಪೀಠ ಎತ್ತಿ ಹಿಡಿದಿದೆ.
ಖಾಸಗಿ ಕಂಪನಿ ನೌಕರರಿಗೂ ಬಿಎಚ್ ಸರಣಿ ನೋಂದಣಿ ಸಂಖ್ಯೆ ನೀಡುವಂತೆ ನಿರ್ದೇಶನ ನೀಡಿದ್ದ ಏಕ ಸದಸ್ಯ ಪೀಠದ ಆದೇಶವನ್ನು ರಾಜ್ಯ ಸಾರಿಗೆ ಇಲಾಖೆ ದ್ವಿಸದ್ಯ ಪೀಠದಲ್ಲಿ ಪ್ರಶ್ನಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ. ಜಿ. ಎಸ್. ಕಮಾಲ್ ಅವರಿದ್ದ ಪೀಠ, ಏಕ ಸದಸ್ಯ ಪೀಠದ ಆದೇಶಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ಅಭಿಪ್ರಾಯ ಪಟ್ಟು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


