ಧರ್ಮಸ್ಥಳದ ಸೌಜನ್ಯ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್ ಐಟಿ) ತನಿಖೆ ನಡೆಸಬೇಕು’ ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಕಾರರು, ‘ಸೌಜನ್ಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳಿಗೆ ಶಿಕ್ಷೆಯಾಗಬೇಕು’ ಎಂದು ಘೋಷಣಾ ಫಲಕ ಪ್ರದರ್ಶಿಸಿದರು. ಸೌಜನ್ಯ ತಾಯಿ ಕುಸುಮಾವತಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸೌಜನ್ಯ ಕೊಲೆ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಗತಿಪರ ಸಂಘಟನೆಗಳ ಸದಸ್ಯರು ಭೇಟಿಯಾಗಿ ಮನವಿ ಸಲ್ಲಿಸಿದರು.
ಕೆ.ಎಸ್. ವಿಮಲಾ, ಗೌರಮ್ಮ, ಲಕ್ಷ್ಮಿ ಪ್ರಭಾ ಬೆಳವಂಗಲ, ಲೀಲಾ ಸಂಪಿಗೆ, ದೇವಿ, ರೂತ್ ಮನೋರಮಾ, ಅಕ್ಕೆ ಪದ್ಮಸಾಲಿ, ಅಖಿಲಾ, ಬಿ. ಎಂ. ಭಟ್, ಭೀಮನಗೌಡ, ಬಸಮ್ಮ, ಸುಮತಿ ಹಾಗೂ ಲಹರಿ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


