ಮೂರು ದಿನಗಳ ಹಿಂದೆ ಕೆ. ಆರ್. ಪುರ-ಬೈಯಪ್ಪನಹಳ್ಳಿ ನಡುವೆ ಮೆಟ್ರೊ ಪ್ರಾಯೋಗಿಕ ಸಂಚಾರ ಆರಂಭಿಸಿದ್ದ ಬಿಎಂಆರ್‌ಸಿಎಲ್ ಇದೀಗ ಶನಿವಾರ ಕೆಂಗೇರಿ-ಚಲ್ಲಘಟ್ಟ ನಡುವೆ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಿದೆ. ಬೆಳಿಗ್ಗೆ 11. 27ರಿಂದ ಸಂಜೆ 4. 15ರ ವರೆಗೆ ಹಲವು ಬಾರಿ ಮೆಟ್ರೊ ರೈಲು ಸಂಚರಿಸಿತು. ಮೆಟ್ರೊ ರೈಲಿನಲ್ಲಿ ಬಿಎಂಆರ್‌ಸಿಎಲ್ ತಾಂತ್ರಿಕ ತಂಡವು ಸಂಚರಿಸಿ ಪರಿಶೀಲಿಸಿತು.
ನೇರಳೆ ಮಾರ್ಗದಲ್ಲಿನ ವಿಸ್ತರಿತ ಕಾಮಗಾರಿ ಇದಾಗಿದ್ದು, ಬೈಯಪ್ಪನಹಳ್ಳಿ-ಕೆ. ಆರ್. ಪುರ ನಡುವೆ 2. 5 ಕಿಲೋಮೀಟರ್ ಹಾಗೂ ಕೆಂಗೇರಿ-ಚಲ್ಲಘಟ್ಟದ ನಡುವೆ 1.9 ಕಿ. ಮೀ ಕಾಮಗಾರಿ ಬಾಕಿ ಉಳಿದಿತ್ತು. ಎರಡೂ ಕಡೆಗಳಲ್ಲಿ ಕಾಮಗಾರಿ ಮುಗಿದಿದೆ. ಕೆಲವು ದಿನಗಳ ಕಾಲ ಪ್ರಾಯೋಗಿಕ ಸಂಚಾರ ನಡೆಸಿ, ಎಲ್ಲ ತಾಂತ್ರಿಕ ತೊಂದರೆಗಳು ಬಗೆಹರಿದ ಬಳಿಕ ಆಗಸ್ಟ್ ಅಂತ್ಯದ ಒಳಗೆ ವಾಣಿಜ್ಯ ಸಂಚಾರ ಆರಂಭಿಸಲಾಗುವುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


