ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ವಿನೋದ್ ತಾವೆ ನೇತೃತ್ವದಲ್ಲಿ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೇಂದ್ರ ನಾಯಕರು, ರಾಜ್ಯ ನಾಯಕರು ಪಂಚಾಯತ್ ಮಟ್ಟದಿಂದ ಪಕ್ಷ ಕಟ್ಟುತ್ತಿದ್ದೇವೆ. ಬೆಂಗಳೂರಿನ ಮೂರು ಕ್ಷೇತ್ರದ ಬಿಜೆಪಿ ಮುಖಂಡರಿಗೆ ಈಗಾಗಲೇ ಸಿದ್ಧತೆಗಳ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಲಾಗಿದೆ’ ಎಂದರು.
”ವಿಧಾನಸಭೆ ಚುನಾವಣೆಯಲ್ಲಿನ ನ್ಯೂನತೆಗಳನ್ನು ಸರಿದೂಗಿಸಿ 2019ರಲ್ಲಿನ ಲೋಕಸಭೆ ಚುನಾವಣೆಯಲ್ಲಿನ ಫಲಿತಾಂಶವನ್ನು ಮರುಕಳಿಸುವಂತೆ ಮಾಡಲು ಮುಂದಿನ 10 ತಿಂಗಳು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಪಕ್ಷದ ಕಾರ್ಯಕರ್ತರಿಗೆ ಕೆಲವು ಸಲಹೆ, ಸೂಚನೆಗಳನ್ನು ನೀಡಲಾಯಿತು. ಮೋದಿ ಸರ್ಕಾರದ ಸಾಧನೆಗಳನ್ನು ಜನಮನ ಮುಟ್ಟಿಸುವಂತೆ ತಿಳಿಸಲಾಗಿದೆ” ಎಂದು ಅವರು ತಿಳಿಸಿದರು.
ಬೆಂಗಳೂರಿನ 3 ಲೋಕಸಭೆ ಕ್ಷೇತ್ರಗಳ ಸಿದ್ಧತೆ, ಪಕ್ಷ ಸಂಘಟನೆ ಮತ್ತು ಮೋದಿ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಲಹೆ, ಸೂಚನೆಗಳನ್ನು ನೀಡಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


