ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ನಿನ್ನೆಯಷ್ಟೇ Demotion ಆಗಿರುವ, ಮಾಜಿ ಸಚಿವ ಹಾಗೂ ಬಿಜೆಪಿಯ ಮುಖಂಡ ಸಿ. ಟಿ. ರವಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಲಭಿಸಲಿದೆ ಎಂಬ ಚರ್ಚೆಗಳು ಜೋರಾಗಿ ಕೇಳಿ ಬರುತ್ತಿದ್ದ ಬೆನ್ನಲ್ಲೇ, ಇದೀಗ ಸ್ಫೋಟಕ ವಿಚಾರವೊಂದು ಬೆಳಕಿಗೆ ಬಂದಿದೆ.
ಈ ಬಾರಿ ಸಿ. ಟಿ. ರವಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಅನುಮಾನ ಆಗುವ ಲಕ್ಷಣಗಳನ್ನು ಬಿಜೆಪಿ ಹೈಕಮಾಂಡ್ ನಾಯಕರ ಉನ್ನತ ಮೂಲಗಳೇ ಸ್ಪಷ್ಟಪಡಿಸಿದೆ. ಅಷ್ಟಕ್ಕೂ ಸಿ. ಟಿ. ರವಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗುವುದು ಅನುಮಾನ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿರುವುದೇಕೆ? ಎಂಬುದನ್ನು ನೋಡುವುದಾದ್ರೆ, ಕಳೆದ ವಾರದಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಿಗೆ ರಾಜ್ಯಾಧ್ಯಕ್ಷರ ನೇಮಕ ಮಾಡಿದೆ. ಅದರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಶ್ರೀಮತಿ ಪುರಂದೇಶ್ವರಿ ಅವರಿಗೆ ಆಂಧ್ರಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡಲಾಗಿದೆ.
ಇಲ್ಲಿಯೂ ಹಾಗೇ ಸಿ. ಟಿ. ರವಿ ಅವರು ಬಿನೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾಗಲೇ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ಹೈಕಮಾಂಡ್ ನಾಯಕರು ಗೌರವಿಸಬಹುದಾಗಿತ್ತು. ಈಗ ಏಕಾಏಕಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿರುವುದನ್ನು ನೋಡಿದ್ರೆ, ಸಿ. ಟಿ. ರವಿಗೆ ರಾಜ್ಯಾಧ್ಯಕ್ಷ ಸ್ಥಾನ ಅನುಮಾನ ಎಂಬ ಚರ್ಚೆಗಳು ಬಿಜೆಪಿ ಪಾಳಯದಲ್ಲಿ ಆರಂಭವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


