ಕಂದಾಯ ಇಲಾಖೆಯಲ್ಲಿ ತಾಂಡವವಾಡುತ್ತಿದ್ದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಚಿವ ಕೃಷ್ಣ ಬೈರೇಗೌಡ ಮುಂದಾಗಿದ್ದಾರೆ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಧ್ಯಮದವರಿಗೆ ಇಂದಿಲ್ಲಿ ತಿಳಿಸಿದರು.
ಇಲಾಖೆಯ ಅಧಿಕಾರಿಗಳು, ನೌಕರರ ವಿರುದ್ಧದ ಸುಮಾರು 67 ಶಿಸ್ತುಕ್ರಮ ಕಡತಗಳು ವಿಚಾರಣೆಯಾಗದೆ ಅಥವಾ ವಿಚಾರಣೆ ಆಗಿಯೂ ಇತ್ಯರ್ಥವಾಗದೇ ಕಳೆದ 5ರಿಂದ 7 ವರ್ಷಗಳ ಕಾಲ ಸಚಿವಾಲಯದಲ್ಲೇ ಬಾಕಿ ಇದ್ದವು. ಪ್ರಸ್ತುತ ಆ ಎಲ್ಲಾ ಕಡತಗಳನ್ನೂ ವಿಲೇವಾರಿ ಮಾಡಲಾಗಿದೆ.
ಪ್ರಸ್ತುತ 67 ಪ್ರಕರಣಗಳ ಪೈಕಿ ತಹಶೀಲ್ದಾರ್ 30, ಗ್ರಾಮ ಆಡಳಿತ ಅಧಿಕಾರಿ 12, ಉಪ ನೋಂದಣಿ ಅಧಿಕಾರಿಗಳು 14, ಶಿರಸ್ತೇದಾರ್ 04, ರಾಜಸ್ವ ನಿರೀಕ್ಷಕರು 01, ಪ್ರಥಮ ದರ್ಜೆ ಸಹಾಕರು 02, ದ್ವಿತೀಯ ದರ್ಜೆ ಸಹಾಯಕರು 1, ಕೇಂದ್ರ ಸ್ಥಾನಿಕ ಸಹಾಯಕರು 01, ಜಿಲ್ಲಾ ನೋಂದಾಣಾಧಿಕಾರಿ 01 ಪ್ರಕರಣಗಳು ಒಳಗೊಂಡಿವೆ. ಈ ಪ್ರಕರಣಗಳ ಪೈಕಿ ತಪ್ಪಿತಸ್ಥರು ಎಂದು ಸಾಬೀತಾಗಿರುವ 2 ಅಧಿಕಾರಿ/ನೌಕರರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ ಜಾರಿಗೊಳಿಸಲಾಗಿದೆ. ಲೋಕಾಯುಕ್ತ ತನಿಖಾ ವರದಿ ಶಿಫಾರಸಿನಂತೆ 18 ಪ್ರಕರಣಗಳಲ್ಲಿ ನೌಕರರ ಮೇಲಿನ ಆರೋಪಗಳು ಸಾಬೀತಾಗದ ಕಾರಣ, ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


