ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಾಡಹಬ್ಬ ದಸರಾ ಸಭೆ ಬಳಿ ಅವರು ಮಾತನಾಡಿದರು. ಸಭೆಯಲ್ಲಿ ಚರ್ಚೆಯಾದ ವಿಷಯಗಳು ಹೀಗಿವೆ, ಶ್ರೀ ರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು. ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.
ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು ದಸರಾದಲ್ಲಿ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಬಿಡಬೇಕು ಎಂದು ತೀರ್ಮಾನಿಸಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


