ಮನೆಯಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸೋಲದೇವನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಸರಘಟ್ಟ ಬಳಿಯ ಕಲ್ಲು ಗುಡ್ಡದಹಳ್ಳಿ ನಿವಾಸಿಗಳಾದ ಶಂಕರ್ (30), ಕುಮಾರ್ (21) ಹಾಗೂ ಶ್ರೀನಿವಾಸ್ ಬಂಧಿತರು.
ಸಲ್ಪರ್ ಪೌಡರ್, ನೈಟ್ರೇಟ್, ಸ್ಫೋಟಕ ಮದ್ದು ಹಾಗೂ ರಾಸಾಯನಿಕ ಪೇಸ್ಟ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಮೂವರು ಆರೋಪಿಗಳು, ಬಂಡೆಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಲ್ಲು ಗುಡ್ಡದಹಳ್ಳಿಯಲ್ಲಿ ಸಣ್ಣ ಪ್ರಮಾಣದ ಕ್ವಾರಿಗಳಿದ್ದು, ಅಲ್ಲಿ ಕಲ್ಲುಗಳನ್ನು ಒಡೆಯಲು ಸ್ಫೋಟಕಗಳನ್ನು ಬಳಸಲಾಗುತ್ತಿತ್ತು. ಈ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
‘ಮನೆಯಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದ ಬಗ್ಗೆ ಮಾಹಿತಿ ಬಂದಿತ್ತು. ಪಿ ಎಸ್ ಐ ನೇತೃತ್ವದ ತಂಡ ಮನೆಯಲ್ಲಿ ಶೋಧ ನಡೆಸಿತ್ತು. ಅದೇ ಸಂದರ್ಭದಲ್ಲಿ ಸ್ಫೋಟಕಗಳು ಪತ್ತೆಯಾದವು. ಬಳಿಕ, ಮೂವರನ್ನು ಬಂಧಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


