nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    • ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ; ರೈತರಿಗೆ ಡಿಕೆಶಿ ಭರವಸೆ
    ರಾಜ್ಯ ಸುದ್ದಿ August 1, 2023

    ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ; ರೈತರಿಗೆ ಡಿಕೆಶಿ ಭರವಸೆ

    By adminAugust 1, 2023No Comments2 Mins Read
    dk shivakumar

    “ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ” ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ. ಕೆ. ಶಿವಕುಮಾರ್ ತಿಳಿಸಿದರು.

    ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ ಜತೆ ಸಂವಾದ ಕಾರ್ಯಕ್ರಮ ನಡೆಸಿದ ಶಿವಕುಮಾರ್ ಅವರು ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವವರ ಸಮಸ್ಯೆ ಆಲಿಸಿ, ಅವರ ಸಲಹೆ ಮತ್ತು ಅಭಿಪ್ರಾಯ ಪಡೆದರು.


    Provided by
    Provided by

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು,  ಜಮೀನು ಉಳಿಸಿಕೊಳ್ಳಬೇಕು, ಮನೆ ಕಟ್ಟಬೇಕು ಎಂಬುದು ಪ್ರತಿಯೊಬ್ಬರ ಕನಸು. ಇಂದಿನ ಸಭೆಯಲ್ಲಿ ನೀವು ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದೀರಿ. ಕಾಲ ಮಿತಿಯಲ್ಲಿ ಯೋಜನೆ ಜಾರಿ, ಪರ್ಯಾಯ ಭೂಮಿ ಹಂಚಿಕೆ, ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಎನ್ ಓ ಸಿ ನೀಡಬೇಕು, ಬದಲಿ ನಿವೇಶನ ನೀಡುವ ಬಗ್ಗೆ ಸಲಹೆ ನೀಡಿದ್ದೀರಿ.

    ನಾನು ಸ್ವಾಧೀನ ಆಗಿರುವ ಭೂಮಿ ಎನ್ ಓ ಸಿ ನೀಡಲು ಸಾಧ್ಯವಿಲ್ಲ. ಅದನ್ನು ನೇರವಾಗಿ ನಿಮಗೆ ಸ್ಪಷ್ಟಪಡಿಸುತ್ತೇನೆ. ನಾನು ಈ ಯೋಜನೆ ನಿಲ್ಲಿಸಲು ಆಗುವುದಿಲ್ಲ. ಆದರೆ ಯಾವ ರೀತಿ ನಿಮ್ಮ ಹಿತ ಕಾಯಬೇಕು, ಯಾವ ರೀತಿ ನಿಮಗೆ ಹೆಚ್ಚಿನ ಅನುಕೂಲ ಆಗುವಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ. ರಸ್ತೆಯೂ ಆಗಬೇಕು, ನಿಮಗೂ ನ್ಯಾಯ ಒದಗಿಸಬೇಕು ಎಂಬುದು ನನ್ನ ಉದ್ದೇಶ.

    ನೀವು ಕೊಟ್ಟಿರುವ ಅಮೂಲ್ಯ ಸಲಹೆಗಳನ್ನು ನಾನು ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇನೆ. ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಆದಷ್ಟು ಬೇಗ ಈ ವಿಚಾರವಾಗಿ ತೀರ್ಮಾನ ಮಾಡಲಾಗುವುದು. ನಾನು ನಿಮ್ಮ ಜತೆ ಇದ್ದೇನೆ. ನಿಮಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ.

    ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ 2007ರಲ್ಲಿ ಅಧಿಸೂಚನೆ ಹೊರಡಿಸಿದೆ. ಆಗಲೇ ಈ ರಸ್ತೆ ನಿರ್ಮಾಣ ಆಗಿದ್ದರೆ ನಮಗೆ ಇಷ್ಟು ಹೊರೆ ಆಗುತ್ತಿರಲಿಲ್ಲ. ನ್ಯಾಯಾಲಯದಲ್ಲಿ ಈ ಯೋಜನೆ ವಿಚಾರಣೆ ಆಗಿ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ಆದೇಶ ಬಂದಿದೆ.

    ನಮ್ಮ ಸರ್ಕಾರ ಹೊಸ ಭೂಮಿಗೆ ಅಧಿಸೂಚನೆ ಹೊರಡಿಸುವ ಪರಿಸ್ಥಿತಿಯಲ್ಲಿ ಇಲ್ಲ. ನನ್ನ ಜಮೀನು ಕೂಡ ಭೂ ಸ್ವಾಧೀನ ಆಗುತ್ತಿದೆ. ಈ ಸಮಯದಲ್ಲಿ ನೋಟಿಫಿಕೇಶನ್ ಆಗಿರುವ ಜಮೀನುಗಳನ್ನು ಡಿನೋಟಿಫಿಕೇಶನ್ ಮಾಡಲು ಸಾಧ್ಯವಿಲ್ಲ. ಒಂದುವೇಳೆ ಮಾಡಿದರೆ ಕಾನೂನು ಸಮಸ್ಯೆ ಎದುರಿಸಬೇಕಾಗುತ್ತದೆ.

    ರೈತನಿಗೆ ಸಹಾಯ ಮಾಡಬೇಕು ಎಂಬುದು ನಮ್ಮ ಆಸೆ. ಈ ಯೋಜನೆಗೆ 25 ಸಾವಿರ ಕೋಟಿ ಅಗತ್ಯವಿದೆ. ಈ ಯೋಜನೆ ಆದರೆ ಸುತ್ತಮುತ್ತಲ ಜಮೀನು ಬೆಲೆ 5 ಪಟ್ಟು ಹೆಚ್ಚಾಗಲಿದೆ. ಇನ್ನು ನಾವು ಈ ಯೋಜನೆ ತಳ್ಳಿಕೊಂಡು ಹೋಗಲು ಆಗುವುದಿಲ್ಲ. ಇದಕ್ಕಾಗಿ ರೈತರಿಂದಲೇ ಅವರ ಸಮಸ್ಯೆ ಅರಿತು, ಅವರ ಸಲಹೆ ಮತ್ತು ಅಭಿಪ್ರಾಯ ಪಡೆಯಲು, ಪರಿಹಾರ ಇದ್ದರೆ ಅದನ್ನು ಪಡೆಯಲು ಈ ಸಭೆ ಮಾಡಿದ್ದೇನೆ. ನಿಮ್ಮ ಪರಿಸ್ಥಿತಿ ನಾನು ಅರಿತಿದ್ದೇನೆ. ನೀವು ನನ್ನ ಸ್ಥಾನದಲ್ಲಿ ನಿಂತು ಈ ವಿಚಾರದಲ್ಲಿ ಯಾವ ರೀತಿ ಮುಂದುವರಿಯಬೇಕು ಎಂದು ಸಲಹೆ ನೀಡಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಶಿವಮೊಗ್ಗ: ನಗರದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ…

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.