ಎಸ್ ಸಿ ಎಸ್ ಪಿ, ಟಿಎಸ್ಸಿಪಿ ಅನುದಾನ ಖರ್ಚು ಮಾಡದಿದ್ದರೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಯ್ದೆ ಹೇಳುತ್ತದೆ. ಕಾಯ್ದೆ ಗಂಭೀರವಾಗಿದೆ. ಅದರಂತೆ ಯಾರು ನಿರ್ಲಕ್ಷ್ಯ ಮಾಡುತ್ತಾರೆ, ಅವರ ವಿರುದ್ಧ ಕಾಯ್ದೆಯನ್ವಯ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಹಲವಾರು ವಿಷಯಗಳನ್ನು ಚರ್ಚಿಸಿದ ವೇಳೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳ ಅನುದಾನ ನೇರವಾಗಿ ಈ ಸಮುದಾಯಗಳಿಗೇ ತಲುಪಬೇಕು ಎಂಬ ಉದ್ದೇಶದಿಂದ ಕಾಯ್ದೆ ರೂಪಿಸಲಾಗಿದೆ. ಆದ್ದರಿಂದ ಈ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ರಾಜ್ಯ ಅಭಿವೃದ್ಧಿ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹದೇವಪ್ಪ, ಸಚಿವರಾದ ನಾಗೇಂದ್ರ, ಹೆಚ್. ಕೆ. ಪಾಟೀಲ್, ಪ್ರಿಯಾಂಕ್ ಖರ್ಗೆ, ಎಂ. ಸಿ. ಸುಧಾಕರ್, ರಾಜ್ಯ ಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ, ಶಾಸಕರಾದ ಪಿ. ಎಂ. ನರೇಂದ್ರ ಸ್ವಾಮಿ, ಪ್ರಸಾದ ಅಬ್ಬಯ್ಯ, ಇ. ತುಕಾರಾಂ, ಪ್ರಕಾಶ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


