ಉಡುಪಿ ಕಾಲೇಜು ಪ್ರಕರಣ ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಅವರು ವಿರೋಧ ಪಕ್ಷದಲ್ಲಿ ಇದ್ದಾರೆ. ಅವರು ಒತ್ತಾಯ ಮಾಡಲೇಬೇಕು. ಅವರು ಹೇಳಿದ್ರು ಅಂತ ನಾವು ಅದನ್ನ ಕೇಳಬೇಕು ಅಂತ ಏನು ಇಲ್ಲ. ಅವರು ಬೇಕಾದ್ರೆ ರಚನಾತ್ಮಕವಾಗಿ ಸಲಹೆ ಕೊಟ್ಟರೆ ಪರವಾಗಿಲ್ಲ. ಅದು ಬಿಟ್ಟು ಪ್ರತಿಭಟನೆ ಮಾಡಿದ್ರೆ ಅವರು ಪ್ರತಿಭಟನೆ ಮಾಡಲಿ. ಅವರ ಪಕ್ಷದ ಖುಷ್ಟೂ ಅವರೇ ಹೇಳಿದ ಮೇಲೂ ಅವರು ನಂಬಲಿಲ್ಲ ಅಂದ್ರೆ ಹೇಗೆ? ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ದೆಹಲಿ ಭೇಟಿ ವಿಚಾರದಲ್ಲಿ ಏನು ಅಜೆಂಡಾ ಇದೆ ನನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ದೆಹಲಿ ಭೇಟಿಯಲ್ಲಿ ಏನು ಅಜೆಂಡಾ ಇದೆಯೋ ನನಗೆ ಗೊತ್ತಿಲ್ಲ.
ಈ ಹಿಂದೆಯೂ ನಾಯಕರುಗಳು ಇಲ್ಲಿಗೆ ಬರುತ್ತಿದ್ದರು. ಕೆಲವೊಮ್ಮೆ ನಮ್ಮನ್ನು ಕರೆಸಿಕೊಳ್ಳುತ್ತಿದ್ದರು. ಗುಲಾಂ ನಬೀ ಆಜಾದ್ ಪ್ರಧಾನ ಕಾರ್ಯದರ್ಶಿಯಾದಾಗ ಅವರೇ ಸಚಿವರ ಜೊತೆಗೆ ಒನ್ ಟು ಒನ್ ಮಾಹಿತಿ ಪಡೆಯುತ್ತಿದ್ದರು. ಲೋಕಸಭೆ ಚುನಾವಣೆ ಸಿದ್ಧತೆಗಳ ಬಗ್ಗೆಯೂ ಚರ್ಚೆ ಆಗಬಹುದು.
ಸಚಿವರ ಕಾರ್ಯ ಪರಿಶೀಲನೆ ಬಗ್ಗೆ ನಮಗೆ ಮಾಹಿತಿ ಇಲ್ಲ. ಸಮನ್ವಯ ಸಮಿತಿ ರಚನೆ ವಿಚಾರದಲ್ಲಿ ಏನು ಅಭಿಪ್ರಾಯ ಇದೆಯೋ ಗೊತ್ತಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ಸೌಜನ್ಯ ಹತ್ಯೆ ಪ್ರಕರಣ ಮರು ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸೌಜನ್ಯ ಕೊಲೆ ಪ್ರಕರಣದ ತನಿಖೆ ಬಗ್ಗೆ ಯಾವುದೇ ಯೋಚನೆ ಮಾಡಿಲ್ಲ. ಸದ್ಯಕ್ಕೆ ಅಂತಹ ಯೋಚನೆ ನಮ್ಮ ಮುಂದೆ ಇಲ್ಲ. ಮುಖ್ಯಮಂತ್ರಿಗಳಿಂದಲೂ ನನಗೆ ಯಾವುದೇ ಸೂಚನೆ ಬಂದಿಲ್ಲ ಎಂದಿರುವ ಪರಮೇಶ್ವರ್,
ಪರೋಕ್ಷವಾಗಿ ಸೌಜನ್ಯ ಕೊಲೆ ಕೇಸ್ ಮರು ತನಿಖೆ ಇಲ್ಲ ಎಂದಿದ್ದಾರೆ.
ಸಿಎಂ ಜೊತೆ ರಹಸ್ಯ ಮಾತುಕತೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಹೌದು ಸಿಎಂ ಜತೆಗೆ ಕುಳಿತು ರಹಸ್ಯವಾಗಿಯೇ ಮಾತುಕತೆ ಮಾಡಿದ್ದೇವೆ.
ವರ್ಗಾವಣೆ ವಿಚಾರವಾಗಿ ರಹಸ್ಯವಾಗಿಯೇ ಮಾತನಾಡಿದ್ದೇನೆ. ವರ್ಗಾವಣೆ ವಿಚಾರವನ್ನು ಬೀದಿಯಲ್ಲಿ ಕುಳಿತು ಮಾತನಾಡುವುದಕ್ಕೆ ಸಾಧ್ಯಾನಾ? ಹಿಂದೆಯೂ ಮಾತನಾಡಿದ್ದೇವೆ. ಮುಂದೆಯೂ ರಹಸ್ಯವಾಗಿಯೇ ಮಾತನಾಡುತ್ತೇವೆ. ಇಂತಹ ವಿಚಾರಗಳನ್ನು ಬೀದಿಯಲ್ಲಿ ಕುಳಿತು ಮಾತನಾಡುವುದಕ್ಕೆ ಆಗುತ್ತಾ? ಎಂದು ಸಿಎಂ ಜೊತೆಗೆ ರಹಸ್ಯ ಸಭೆಯಲ್ಲಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


