ತುಮಕೂರು: ನಗರದ ಹೊರವಲಯದಲ್ಲಿ ಹಾದು ಹೋಗಿರೋ ಬೆಂಗಳೂರು–ಪುಣೆ ಮಾರ್ಗದ ನಡುವಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಾರ ಪ್ರಮಾಣದ ರಸ್ತೆ ಅಪಘಾತಗಳಲ್ಲಿ ಅನೇಕ ಮಂದಿ ಮೃತಪಟ್ಟಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಅಪಘಾತಗಳ ಸಂಖ್ಯೆಯನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಖುದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಕಳೆದ ಒಂದು ವರ್ಷದಲ್ಲಿ 750ಕ್ಕೂ ಹೆಚ್ಚು ಅಪಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ರಸ್ತೆ ವೀಕ್ಷಿಸಿದರು.
ತುಮಕೂರು ಜಿಲ್ಲೆಯಲ್ಲಿ ಸಂಚಾರ ವ್ಯವಸ್ಥೆಯ ಬಗ್ಗೆ ಸಾಕಷ್ಟು ದೂರುಗಳು ಬಂದಿರೋ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಗೆ ಭೇಟಿ ನೀಡಿದರು, ಅಲ್ಲದೆ ಪೊಲೀಸರಿಗೆ ಮಾರ್ಗದರ್ಶನ ನೀಡಿದರು.
ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ಬಳಿ ದಂಡ ವಿಧಿಸುವುದೇ ಪ್ರಮುಖ ಅಂಶವಾಗಬಾರದು. ಬದಲಾಗಿ ಅಪಘಾತ ಪ್ರಕರಣಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಪೊಲೀಸ್ ಅಧೀಕ್ಷಕ ರಾಹುಲ್ ಕುಮಾರ್ ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


