nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    April 28, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026
    Facebook Twitter Instagram
    ಟ್ರೆಂಡಿಂಗ್
    • ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ
    • ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ
    • ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ
    • ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೌಜನ್ಯಳ ಸಾವಿಗೆ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು: ಡಾ.ವೀರೇಂದ್ರ ಹೆಗ್ಗಡೆ ಮನವಿ
    ರಾಜ್ಯ ಸುದ್ದಿ August 2, 2023

    ಸೌಜನ್ಯಳ ಸಾವಿಗೆ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು: ಡಾ.ವೀರೇಂದ್ರ ಹೆಗ್ಗಡೆ ಮನವಿ

    By adminAugust 2, 2023No Comments2 Mins Read
    verendra-hegde

    ದಕ್ಷಿಣ ಕನ್ನಡ ಜಿಲ್ಲೆಯ ಸೌಜನ್ಯ ಸಾವು ಪ್ರಕರಣ ಸದ್ಯ ಕೋರ್ಟ್, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇದೆ. ಹೀಗಾಗಿ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ. ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದೆಂದು ವಿನಂತಿಸುತ್ತೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

    2012 ರಲ್ಲಿ ನಡೆದ ಪಾಂಗಳ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿ.ಐ.ಡಿ. ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿ.ಬಿ.ಐ. ಮೂಲಕ ತನಿಖೆ ನಡೆಸುವಂತೆ ಸರಕಾರವನ್ನು ಶ್ರೀಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು. ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಲಾಗಿದೆ. ಅದರಂತೆ ತನಿಖೆ ನಡೆಸಿ ಸದರಿ ಇಲಾಖೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.


    Provided by
    Provided by

    ಇದಾದ ನಂತರ ಕೋರ್ಟ್ ವಿಚಾರಣೆ ನಡೆಸಿ ಆರೋಪಿಯನ್ನು ಸದರಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು ತಿಳಿದಿದೆ. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗೂ ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದರಿಂದ ಶ್ರೀಕ್ಷೇತ್ರದ ಭಕ್ತರಲ್ಲಿ ಹಾಗೂ ಕ್ಷೇತ್ರದೊಂದಿಗೆ ತೊಡಗಿಸಿಕೊಂಡಿರುವ ಅನೇಕರಿಗೆ ಖೇದ ಉಂಟಾಗಿದ್ದು ಈ ಮೂಲಕ ಸಮಸ್ತ ಭಕ್ತಾದಿಗಳಲ್ಲಿ ಹಾಗೂ ಸಾರ್ವಜನಿಕರ ಗಮನಕ್ಕೆ ತರ ಬಯಸುವುದೆಂದರೆ ಈ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು. ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ. ಆ ಪ್ರಕಾರ ಸರ್ಕಾರ ಅತ್ಯುನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆಗಾಗಿ ಒಳಪಡಿಸಿರುತ್ತದೆ.

    ಸೌಜನ್ಯ ಸಾವು ಪ್ರಕರಣ ಪ್ರಸ್ತುತ ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗು ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ. ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗು ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026

    ತುಮಕೂರು: ಕಳೆದ ಕೆಲವು ದಿನಗಳಿಂದ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮೈದಾಳ ಕೆರೆ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಸ್ತುವಾರಿ…

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    April 28, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.