ಮುಂಬರುವ ರಕ್ಷಾ ಬಂಧನ ಹಬ್ಬದಲ್ಲಿ ಸಾಧ್ಯವಾದಷ್ಟು ಮುಸ್ಲಿಂ ಮಹಿಳೆಯರನ್ನು ತಲುಪುವಂತೆ ಅವರು ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.
ಬಿಜೆಪಿ ಹಾಗೂ ಎನ್ ಡಿಎ ಮಿತ್ರಕೂಟ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಪೂರ್ವಾಭಾವಿ ಸಿದ್ಧತೆಗಳನ್ನು ನಡೆಸುತ್ತಿದೆ ಇದೇ ವೇಳೆ ಮುಸ್ಲಿಮ್ ಮಹಿಳೆಯರನ್ನೊಳಗೊಂಡು ರಕ್ಷಾ ಬಂಧನ ಆಚರಿಸಲು ಪ್ರಧಾನಿ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ತ್ರಿವಳಿ ತಲಾಖ್ ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರವು ಮುಸ್ಲಿಂ ಮಹಿಳೆಯರಲ್ಲಿ ಭದ್ರತೆಯ ಭಾವನೆಯನ್ನು ಹೆಚ್ಚಿಸಿದೆ. ಈ ಬಾರಿ ಮುಸ್ಲಿಂ ಸಹೋದರಿಯರ ಜತೆ ರಕ್ಷಾ ಬಂಧನ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ.
ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್‌ನ ಬಿಜೆಪಿ ನೇತೃತ್ವದ ಎನ್ ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ತಲುಪಲು ರಕ್ಷಾ ಬಂಧನದ ಸಂದರ್ಭದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಪ್ರಧಾನಿ ಕೇಳಿಕೊಂಡರು ಎಂದು ಸಭೆಯಲ್ಲಿದ್ದ ಕೆಲವು ಸಂಸದರು ಹೇಳಿದರು. ರಕ್ಷಾ ಬಂಧನದ ಹಬ್ಬವು ಈ ವರ್ಷ ಆಗಸ್ಟ್ 30 ರಂದು ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


