ಮಣಿಪುರದ ನರಮೇಧ ಹಾಗೂ ಮಹಿಳೆಯರ ಮೇಲಿನ ವೈಶಾಚಿಕ ಕೃತ್ಯವನ್ನು ಖಂಡಿಸಿ ತುರುವೇಕೆರೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರೆ ಮೂಲಕ ತೆರಳಿದ ಪ್ರತಿಭಟನಾಕಾರರು, ತಾಲೂಕು ಕಚೇರಿ ಆವರಣ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕಳೆದ ಎರಡು ಮೂರು ತಿಂಗಳಿನಿಂದ ಮಣಿಪುರದಲ್ಲಿ ಮಹಿಳೆಯರ ಮೇಲೆ ಅಮಾನುಷ ಕೃತ್ಯಗಳು, ಅತ್ಯಾಚಾರ, ನರಮೇಧಗಳು ನಡೆಯುತ್ತಿವೆ. ಇದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ. ಜೊತೆಗೆ ಸಹೋದರತ್ವ, ಸಹಬಾಳ್ವೆ, ಅಡಿಯಲ್ಲಿ ಜೀವಿಸುತ್ತಿರುವ ನಾವು ಇಂತಹ ಹೀನ ಕೃತ್ಯವನ್ನು ಖಂಡಿಸಲೇಬೇಕು ಎಂದು ಪ್ರತಿಭಟನಾಕಾರರು ಹೇಳಿದರು.
ಮಣಿಪುರದಲ್ಲಿ ನಡೆದ ಅಮಾನವೀಯ ಕೃತ್ಯಗಳಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಮಣಿಪುರದ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ, ಆದಿ ಜಾಂಬವ ಕ್ಷೇಮಾಭಿವೃದ್ಧಿ ಸೇವಾ ಸಮಿತಿ , ತಾಲೂಕು ಚಲವಾದಿ ಮಹಾಸಭಾ , ಕರುನಾಡು ವಿಜಯ ಸೇನೆ, ಸಿ ಐ ಟಿ ಯು ಸಂಘಟನೆ, ಕುವೆಂಪು ಕರುನಾಡು ರಕ್ಷಣಾ ವೇದಿಕೆ, ಕಟ್ಟಡ ಕಾರ್ಮಿಕರ ಸಂಘ ಸೇರಿದಂತೆ ಅನೇಕ ರೈತ ಪರ ಸಂಘಟನೆಗಳು ಪಾಲ್ಗೊಂಡಿದ್ದವು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


