ನಮ್ಮ ಪಕ್ಷದ 23 ಕಾರ್ಯಕರ್ತರು ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಚಿಕ್ಕ ವಯಸ್ಸಿನವರೆಲ್ಲ ಅಧ್ಯಕ್ಷ ಉಪಾಧ್ಯಕ್ಷರುಗಳಾಗಿದ್ದಾರೆ, ಅವರೆಲ್ಲರಿಗೂ ನನ್ನ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ತುರುವೇಕೆರೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಸನ್ಮಾನಿಸಿ ಮಾತನಾಡಿದ ಶಾಸಕರು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಒಟ್ಟಿಗೆ ಕೆಲಸಗಳನ್ನು ಹಮ್ಮಿಕೊಂಡು ಎಲ್ಲರ ವಿಶ್ವಾಸ ಗಳಿಸಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಿ ಎಂದು ಕಿವಿಮಾತು ಹೇಳಿದರು.
ಜೆಡಿಎಸ್ ಮುಖಂಡ ಹೆಡಗಿಹಳ್ಳಿ ವಿಶ್ವನಾಥ್ ಮಾತನಾಡಿ, 34 ಗ್ರಾಮ ಪಂಚಾಯಿತಿಗಳಲ್ಲಿ 23 ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರವನ್ನು ನಮ್ಮ ಜೆಡಿಎಸ್ ಪಕ್ಷ ಹಿಡಿದಿದೆ ಎಂದರೆ, ನಮ್ಮ ಶಾಸಕರಿಗೆ ಇದರ ಶ್ರೇಯಸ್ಸು ಲಭಿಸುತ್ತದೆ. ಇದು ಅವರ ಹೋರಾಟಕ್ಕೆ ಸಂದ ಜಯ ಎಂದರು.
ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸೊಪ್ಪನಹಳ್ಳಿ ಮಧು ಸ್ವಾಗತಿಸಿದರು. ವೆಂಕಟಾಪುರ ಯೋಗೇಶ್ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಮುಖಂಡರುಗಳಾದ ಲೀಲಾವತಿ ಗಿಡ್ಡಯ್ಯ, ವಿಜಯೇಂದ್ರ, ಲೋಕೇಶ್ ಬಾಬು, ತಿಮ್ಮೇಗೌಡ, ಗಿರೀಶ್ ಆಚಾರ್, ಲಂಕೇಶ್ ಸೇರಿದಂತೆ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರುಗಳು ಹಾಗೂ ಉಪಾಧ್ಯಕ್ಷರುಗಳು ಸದಸ್ಯರುಗಳು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


