ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ವರ್ ಖಂಡ್ರೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಜಾನೇಂದ್ರ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಸದಾಶಿವನಗರ ಠಾಣೆಗೆ ದೂರು ನೀಡಿದೆ.
ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಆರಗ ಅವರು ಜನಾಂಗೀಯ ನಿಂದನೆ ಹಾಗೂ ಪ್ರಾಂತ್ಯವಾರು ಭೇದವನ್ನು ಉಂಟು ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಈ ರೀತಿ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಶಾಂತಿ ಹಾಗೂ ಪ್ರಾಂತ್ಯವಾರು ಘರ್ಷಣೆ ಮೂಡಿಸಲು ಮುಂದಾಗಿದ್ದಾರೆ ಎಂದು ಮಹಾಸಭಾದ ಕಾರ್ಯದರ್ಶಿ ಎಚ್. ಎಂ. ರೇಣುಕ ಪ್ರಸನ್ನ ದೂರಿನಲ್ಲಿ ತಿಳಿಸಿದ್ದಾರೆ.
ಅನರ್ಹಗೊಳಿಸಿ: ಸಮಾಜದಲ್ಲಿ ಅಶಾಂತಿ ಉಂಟು ಮಾಡಲು ಕಾರಣರಾಗಿರುವ ಆರಗ ಜ್ಞಾನೇಂದ್ರ ಅವರನ್ನು ತಕ್ಷಣವೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ರೇಣುಕ ಪ್ರಸನ್ನ ವಿಧಾನಸಭೆ ಸ್ಪೀಕರ್ ಅವರನ್ನು ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


