ಮೊದಲನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಎರಡನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ವ್ಯತ್ಯಾಸ ಇದೆ. ಈಗಿನ ಸಿಎಂ ಸಿದ್ದರಾಮಯ್ಯ ಗೆ ಆಡಳಿತದ ಮೇಲಿನ ಹಿಡಿತ ತಪ್ಪಿದೆ.ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸರ್ಕಾರದ ಆರಂಭದಲ್ಲಿಯೇ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಶಾಸಕಾಂಗ ಸಭೆಯಲ್ಲಿಯೂ ಶಾಸಕರು ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟಿಲ್ಲ. ಟಾನ್ಸಫರ್ ಮಾಡುವ ದಂಧೆ, ಸ್ವಜನ ಪಕ್ಷಪಾತ. ಅವ್ಯಾಹತವಾಗಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲದ ಸಂದರ್ಭದಲ್ಲಿ ಪ್ರವಾಹ, ಬರ ಇರುವ ಸಂದರ್ಭದಲ್ಲಿ ರಾಜ್ಯದಲ್ಲಿ ಆಡಳಿತ ವೈಫಲ್ಯತೆ ಕಾಣಿಸುತ್ತಿದೆ.
ಎರಡೇ ತಿಂಗಳಲ್ಲಿ ಮುಖ್ಯಮಂತ್ರಿ ಗಳು ಸಂಪುಟದ ಸಚಿವರನ್ನು ಕರೆದುಕೊಂಡು ದೆಹಲಿಗೆ ಹೋಗಿ ಸಭೆ ನಡೆಸಿರುವುದು ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಅಂತ ಗೊತ್ತಾಗಿದೆ. ಸಿದ್ದರಾಮಯ್ಯ ಒನ್ ಗೂ, ಸಿದ್ದರಾಮಯ್ಯ ೨ ಬಹಳಷ್ಟು ವ್ಯತ್ಯಾಸವಾಗಿದೆ. ರಾಜಕೀಯ ಸ್ಥಿತಿಗತಿ ಆಗಿನಿಂದ ಈಗ ಬದಲಾಗಿದೆ. ಸಿದ್ದರಾಮಯ್ಯ ಅವರ ಆರೋಗ್ಯ ಚೆನ್ನಾಗಿದೆ. ಅವರು ಚೆನ್ನಾಗಿರಲಿ, ಆದರೆ, ಅವರು ಅಡಳಿತ ನಡೆಸುವಲ್ಲಿ ಮೊದಲಿನಷ್ಟು ಸ್ಟ್ರಾಂಗ್ ಇಲ್ಲ ಎಂದು ಅಭಿಪ್ರಾಯ ಪಟ್ಟರು.
ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಮಾತನಾಡುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗುರುವ ಅವ್ಯವಹಾಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ ಈ ಬಗ್ಗೆ ಉತ್ತರ ನೀಡಲಿ. ನಮ್ಮ ಅವಧಿಯಲ್ಲಿ ಅಭಿವೃದ್ಧಿಗೆ ಬಿಡುಗಡೆಯಾದ ಹಣ ತಡೆ ಹಿಡಿದಿದ್ದಾರೆ. ಇದರಿಂದ ಯಾವುದೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


