ಕೊಬ್ಬರಿ ಧಾರಣೆ ಕುಸಿತ ಕಂಡಿರುವುದನ್ನು ಖಂಡಿಸಿ ತುರುವೇಕೆರೆ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಗುರುವಾರ ಬಂದ್ ಆಚರಿಸಲಾಯಿತು.
ಬೆಳಗ್ಗೆ 6 ಗಂಟೆಯಿಂದಲೇ ಪಟ್ಟಣದ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರವನ್ನು ಸ್ಥಗಿತಗೊಳಿಸುವ ಮೂಲಕ ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಲಾಗಿದ್ದು, ಬಂದ್ ಭಾಗಶಃ ಯಶಸ್ವಿಯಾಗಿದೆ.
ತುರುವೇಕೆರೆ ಎಪಿಎಂಸಿ ಮಾರುಕಟ್ಟೆಯಿಂದ ಪ್ರತಿಭಟನಾಕಾರರು ರೋಡ್ ಶೋ ಮೂಲಕ ದಬ್ಬೇಗಟ್ಟ ರಸ್ತೆಯಲ್ಲಿ ಸಾಗಿ ಬಾಣಸಂದ್ರ ಮತ್ತು ಮಾಯಸಂದ್ರ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು.
ಇದೇ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ರಾಜ್ಯ ಹಸಿರು ಸೇನೆ ಅಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್, 1983ನೇ ಇಸ್ವಿಯಲ್ಲಿ 9700 ಇದ್ದಂತಹ ಕೊಬ್ಬರಿ ಧಾರಣೆ ನಲವತ್ತು ವರ್ಷಗಳ ನಂತರ 8000ಗಳಿಗೆ ಕುಸಿದಿದೆ ಎಂದು ಆತಂಕ ವ್ಯಕ್ತಪಡಿಸಿದರಲ್ಲದೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಯಾವ ಮಾನದಂಡವನ್ನು ಇಟ್ಟುಕೊಂಡು ಬೆಲೆ ನಿಗದಿ ಮಾಡುತ್ತೀರಿ ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, ತಾಲೂಕು ಅಧ್ಯಕ್ಷ ತಾಳ್ಕೆರೆ ನಾಗೇಂದ್ರ, ಸತೀಶ್ ಕೆಂಕೆರೆ, ಧನಂಜಯ, ಡಿ.ಪಿ.ರಾಜು, ವರ್ತಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಕುವೆಂಪು ಕರುನಾಡ ಸೇನೆಯ ವೆಂಕಟೇಶ್, ಸಿಐಟಿಯು ಸತೀಶ್, ಬೀದಿಬದಿ ವ್ಯಾಪಾರಿಗಳ ಸಂಘದ ಮಾರುತಿ, ಧನಂಜಯ ಹಾಗೂ ತಾಲೂಕಿನ ಪ್ರಗತಿಪರ ಸಂಘಟನೆಗಳು, ಸವಿತಾ ಸಮಾಜದವರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA