ತುಮಕೂರು: ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತುಮಕೂರು ತಾಲ್ಲೂಕಿನ ಚಿಕ್ಕತೊಟ್ಟಿಲು ಕೆರೆ ಬಳಿ ನಡೆದಿದೆ.
ಭೀಮಾಶಂಕರ್ (15) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭೀಮಾಶಂಕರ್ ತುಮಕೂರು ತಾಲೂಕಿನ ಬೆಳದರ ಸರ್ಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.
ಚಿಕ್ಕತೊಟ್ಟಿಲು ಕೆರೆ ಬಳಿ ನಡೆಯುತ್ತಿದ್ದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ಭೀಮಾಶಂಕರ್ ಕ್ರೀಡಾಕೂಟದಲ್ಲಿ ನಡೆದ ರಿಲೇ ಸ್ಫರ್ಧೆ ಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದನು.
ಬಹುಮಾನ ಪಡೆಯುವ ಮೊದಲೇ ಹೃದಯಾಘಾತದಿಂದ ಮೃತ ಪಟ್ಟಿದ್ದಾನೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಪ್ರಾಣಬಿಟ್ಟಿದ್ದಾನೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆಯಲಿರುವ ಮರಣೋತ್ತರ ಪರೀಕ್ಷೆ ನಂತರ ಆತನ ಪೋಷಕರಿಗೆ ಮೃತ ದೇಹವನ್ನು ಹಸ್ತಾಂತರಿಸಲಾಗುವುದು. ಈ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


