ರಾಜ್ಯದಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಎಜುಕೇಷನ್ (ಸಿಬಿಎಸ್ಸಿ) ಮತ್ತು ಕೌನ್ಸಿಲ್ ಪಾರ್ ದಿ ಇಂಡಿಯನ್ ಸ್ಕೂಲ್ ಆಫ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಎಸ್‌ಸಿಐ) ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಿ, ಕಾನೂನು ರೂಪಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ, ಹಲವು ಮಕ್ಕಳ ಪೋಷಕರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಿ.ಸೋಮಸೇಖರ್ ಎಂಬುವರು ಸೇರಿದಂರೆ 19 ಮಂದಿ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ. ಜೆ. ಎಸ್. ಕಮಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.
ಕನ್ನಡ ಮಾತೃಭಾಷೆಯಲ್ಲದ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಮಧ್ಯಭಾಗದಲ್ಲಿ ಕರ್ನಾಟಕದ ಶಾಲೆಗಳಿಗೆ ಸೇರುವ ವಿದ್ಯಾರ್ಥಿಗಳಿಗೆ ಕಡ್ಡಾಯ ಮಾಡಿರುವುದರಿಂದ ಕನ್ನಡ ಭಾಷೆ ಅಧ್ಯಯನ ಮಾಡಲು ಕಷ್ಟವಾಗುತ್ತದೆ. ಅಲ್ಲದೆ, ಕನ್ನಡ ಭಾಷೆಯನ್ನು ಕಡ್ಡಾಯ ಮಾಡದಿದ್ದಲ್ಲಿ ಪ್ರಸ್ತುತ ನೀಡಿರುವ ಎನ್‌ಒಸಿಯನ್ನು ಹಿಂಪಡೆಯುವುದಾಗಿ ರಾಜ್ಯದ ಅಧಿಕಾರಿಗಳು ಸಿಬಿಎಸ್ ಸಿ ಮತ್ತು ಸಿಐಎಸ್ ಸಿಇ ಶಾಲೆಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


