ಆರೋಗ್ಯ ಸೌಧದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಮಸ್ಯೆಗಳನ್ನ ಅಲಿಸಿದರು. ಬಿ. ಆರ್. ಎಸ್ ನವರು ನೀಡಬೇಕಾಗಿದ್ದ, ಬಾಕಿ ವೇತನವನ್ನ 45 ದಿನಗಳ ಒಳಗಾಗಿ ಪಾವತಿಸುವುದಾಗಿ ಸಚಿವರು ಸಿಬ್ಬಂದಿಗಳಿಗೆ ಭರವಸೆ ನೀಡಿದರು.
ಇಎಸ್‌ಐ, ಪಿಎಫ್ ಕುರಿತಂತೆ ಅಗಸ್ಟ್ 31 ರೊಳಗೆ ಕ್ರಮ ಕೈಗೊಳ್ಳುವಂತೆ ಸಂಜೀವಿನಿ ಸಂಸ್ಥೆಯವರಿಗೆ ಇದೇ ವೇಳೆ ತಾಕೀತು ಮಾಡಲಾಯಿತು. ಆರೋಗ್ಯ ಸಚಿವರ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟು, ಡಯಾಲಿಸಿಸ್ ಕೇಂದ್ರಗಳಲ್ಲಿ ತಮ್ಮ ಕಾರ್ಯ ಮುಂದುವರಿಸಲು ಸಿಬ್ಬಂದಿಗಳು ನಿರ್ಧರಿಸಿದ್ದಾರೆ. ಸಭೆಯಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಎಂ. ಡಿ ಎನ್. ಎಚ್. ಎಮ್ ನವೀನ್ ಭಟ್ ಪಾಲ್ಗೊಂಡಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


