ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರಾಂಡ್ ಬೆಂಗಳೂರು’ ಅಭಿಯಾನಕ್ಕೆ 10,479 ಸಲಹೆಗಳು ಸ್ವೀಕಾರವಾಗಿವೆ. ಗುರುವಾರ ಜ್ಞಾನಭಾರತಿ ಆವರಣದಲ್ಲಿ ಆಯೋಜಿಸಲಾಗಿದ್ದ ಘನತ್ಯಾಜ್ಯ ನಿರ್ವಹಣೆ ಪಾಲುದಾರರ ಸಭೆಯಲ್ಲಿ ಬಂದಂತಹ ಸಲಹೆಗಳು ಮತ್ತು ನಾಗರಿಕರಿಂದ ಈಗಾಗಲೇ ಬಂದಿರುವ ಎಲ್ಲ ಸಲಹೆಗಳನ್ನು ಕ್ರೋಢೀಕರಿಸಿ ಅಧ್ಯಯನ ನಡೆಸಿ ಅಂತಿಮವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ.
ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಅಧಿಕಾರಿಗಳು ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಸಲಹೆಗಳನ್ನು ಬೇರ್ಪಡಿಸಿ ವರದಿ ಸಿದ್ಧಪಡಿಸುವ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ. ನಾಗರಿಕರಿಂದ ಬಂದಿರುವ ಸಲಹೆಗಳ ಸಂಬಂಧ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್, ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಬೆಂಗಳೂರು ವಿವಿ ರಿಜಿಸ್ಟರ್ ಶೇಖ್ ಲತೀಫ್ ಮಾತನಾಡಿ, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸ್ವಚ್ಛ ಬೆಂಗಳೂರು ವಿಭಾಗಕ್ಕೆ ನಮ್ಮ ವಿವಿ ಶೈಕ್ಷಣಿಕ ಪಾಲುದಾರವಾಗಿದೆ. ಸ್ವಚ್ಛ ಬೆಂಗಳೂರು ವಿಭಾಗಗಕ್ಕೆ ಬಂದಿರುವ ಸಲಹೆಗಳನ್ನು ಈಗಾಗಲೇ ವಿಂಗಡಿಸಲಾಗಿದೆ. ವಿಚಾರ ಸಂಕಿರಣದಲ್ಲಿ ಬಂದಿರುವ ಸಲಹೆಗಳನ್ನೂ ಒಟ್ಟುಗೂಡಿಸಿ ವರದಿ ತಯಾರಿಸಲಾಗುವುದು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


