ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿರಿಸಿದ್ದ ಹಣವನ್ನು ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿ ಬೇರೆ ಬೇರೆ ಕಾಮಗಾರಿಗಳಿಗೆ ಬಳಸಿಕೊಂಡಿತ್ತು. ಇಂತಹ ಪಕ್ಷದ ನಾಯಕರು ಈ ದಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ನಮ್ಮ ಸರ್ಕಾರದ ಬಗ್ಗೆ ಟೀಕಿಸುತ್ತಿರುವುದು
ವಿಪರ್ಯಾಸವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹದೇವಪ್ಪ ಕಿಡಿಕಾರಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ನೈತಿಕತೆ ಇಲ್ಲದೇ ಮಾತನಾಡುತ್ತಿರುವ ಇವರ ಮಾತುಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಎಸ್ ಸಿ ಎಸ್ ಪಿ ಮತ್ತು ಟಿ ಎಸ್ ಪಿ ಕಾಯ್ದೆಯಡಿ ಭಾಗಶಃ ಅನುದಾನವನ್ನು ನೀಡಲಾಗಿದ್ದು, ಇಲ್ಲಿ ಎಲ್ಲಿಯೂ ನಿಯಮಾವಳಿಗಳನ್ನು ಮೀರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


