ಹಾಡಹಗಲೇ ದ್ವಿಚಕ್ರ ವಾಹನ ಸವಾರನನ್ನು ಅಡ್ಡಗಟ್ಟಿ, ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿರುವ ಘಟನೆ ವಿಲಿಯಮ್ ಟೌನ್ ನಲ್ಲಿ ನಡೆದಿದೆ. ಹೆಲ್ಮಟ್ ಧರಿಸಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಖದೀಮರು ಸ್ಕೂಟಿಯಲ್ಲಿ ಹೋಗುತ್ತಿದ್ದ ಸವಾರನನ್ನು ಅಡ್ಡಗಟ್ಟಿದ್ದಾರೆ. ಬಳಿಕ ಮಾರಕಾಸ್ತ್ರ ತೋರಿಸಿ ಆತನ ಜೇಬಿನಲ್ಲಿದ್ದ ಮೊಬೈಲ್ ಫೋನ್, ವ್ಯಾಲೆಟ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಸಾರ್ವಜನಿಕರೊಬ್ಬರು ಟ್ವಿಟ್ ಮಾಡುವ ಮೂಲಕ ಪೊಲೀಸರ ಗಮನಕ್ಕೆ ತಂದಿದ್ದಾರೆ. ಆದರೆ ಠಾಣೆಗೆ ಈವರೆಗೂ ಯಾವುದೇ ದೂರು ಬಂದಿಲ್ಲ ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


