ಬೆಂಗಳೂರು: ನಗರದ ಖಾಸಗಿ ಶಾಲೆಯ ಪ್ರಾಂಶುಪಾಲನೊಬ್ಬ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.
ವರ್ತೂರು ಸಮೀಪದ ಶಾಲೆಗೆ ಬಾಲಕಿ ಎಂದಿನಂತೆ ತೆರಳಿ ಮನೆಗೆ ವಾಪಸ್ ಆಗಿದ್ದಳು. ಮನೆಗೆ ಮರಳಿದ ವೇಳೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ವಿಪರೀತ ನೋವಿನಿಂದ ಬಳಲಿದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಡಿಸಿದ್ದಾರೆ ಎಂದು ಪೋಷಕರು ಹೇಳಿದ್ದಾರೆ.
ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲನೇ ಆಕೆಯನ್ನು ಖಾಲಿ ರೂಮಿಗೆ ಕರೆದೊಯ್ದು ಕೃತ್ಯ ಎಸಗಿರುವುದಾಗಿ ತಿಳಿಸಿದ್ದಾಳೆ. ಈ ಸಂಬಂಧ ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


