ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮಂಡ್ಯದ ಹೊಳಲು ಗ್ರಾಮದಲ್ಲಿ ನಡೆದಿದೆ.
ಮಾದ ಅಲಿಯಾಸ್ ಮಾದಪ್ಪ ಎಂಬಾತನನ್ನು ಬಾಸ್ ಎಂದು ಕರೆಯದೇ ಇರುವುದಕ್ಕೆ ಮಾದ ಹಾಗೂ ಆತನ ಸಹಚರರಾದ ಚಿಂಟು, ತರುಣ್, ಸುಶಾಂತ್ ಹಾಗೂ ಚಂದನ್ ಎಂಬುವವರು ಶಾರಂತ್ ಎಂಬ ಯುವಕನ ಬಳಿ ಗಲಾಟೆ ಮಾಡಿದ್ದಾರೆ. ಬಳಿಕ ಮಚ್ಚಿನಿಂದ ಹೊಡೆದು, ಡ್ರಾಗನ್ ನಿಂದ ಚುಚ್ಚಿ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಈ ಹಿಂದೆ ಮಾದಪ್ಪನಿಗೆ ಬಾಸ್ ಎಂದು ಕರೆಯಬೇಕು ಎಂದು ಪುಡಿ ರೌಡಿಗಳು ಎಚ್ಚರಿಸಿದ್ದರು. ಇದಕ್ಕೆ ಶಾರಂತ್ ಅವನು, ನನಗೆ ಯಾವ ಬಾಸ್ ಎಂದು ಹೇಳಿದ್ದ. ಇದೇ ವಿಚಾರಕ್ಕೆ ಗುರುವಾರ ಸ್ನೇಹಿತರೊಂದಿಗೆ ಹುಟ್ಟು ಹಬ್ಬ ಆಚರಿಸಿ ಗ್ರಾಮದ ಬಳಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ದುಷ್ಕರ್ಮಿಗಳು ಶಾರಂತ್ ಮೇಲೆ ದಾಳಿ ನಡೆಸಿದ್ದಾರೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


