ಹೋಟೆಲ್ ಗಳಲ್ಲಿ ತಿಂಡಿ-ತಿನಿಸುಗಳ ದರ ಏರಿಕೆ ಮಾಡಿರುವುದು ಸರಿಯಲ್ಲ ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. ನಗರದ ಹೋಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ, ಇಂದು ಮಧ್ಯಾಹ್ನ ನಗರದ ಕೆಂಪೇಗೌಡ ಬಸ್ ನಿಲ್ದಾಣದ ಬಳಿ 1 ರೂ. ಗೆ ರಾಗಿ ಮುದ್ದೆ, ಸಾರು ನೀಡುವ ಮೂಲಕ ವಿನೂತನ ರೀತಿಯಲ್ಲಿ ಅವರು ಪ್ರತಿಭಟನೆ ಮಾಡಿದರು.
ತಿಂಡಿಗಳ ಬೆಲೆ ಏರಿಕೆ ಅವೈಜ್ಞಾನಿಕ. ಶೇ. 60 ರಷ್ಟು ಜನರು ಹೋಟೆಲ್ ತಿಂಡಿಗಳನ್ನೇ ಅವಲಂಬಿಸಿದ್ದಾರೆ. ಹೀಗಾಗಿ, ಹೋಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಸಬಾರದು ಎಂದು ಅವರು ಆಗ್ರಹಿಸಿದರು. ಬೆಲೆ ಇಳಿಕೆ ಮಾಡುವವರೆಗೆ ಮುಂದಿನ ದಿನಗಳಲ್ಲಿ ನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ. ರಾಗಿ ಮುದ್ದೆಗೆ 50 ರೂಪಾಯಿಯಾಗಿದೆ. ನಾವು 1 ರೂಪಾಯಿಗೆ ಒಂದು ರಾಗಿ ಮುದ್ದೆ ಹಾಗೂ ಸಾಂಬಾರು ಮಾರುವ ಮೂಲಕ ಹೋಟೆಲ್ ಗಳಲ್ಲಿ ತಿಂಡಿಗಳ ದರ ಇಳಿಕೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದೇವೆ ಎಂದರು. ಸರ್ಕಾರ ಹಾಲಿನ ದರವನ್ನೂ ಏರಿಕೆ ಮಾಡಿದೆ. ಅದನ್ನೂ ಕೂಡ ಇಳಿಕೆ ಮಾಡಬೇಕು.
ಸರ್ಕಾರ ಚಿಂತನೆ ಮಾಡಿ ವೈಜ್ಞಾನಿಕವಾಗಿ ಹೋಟೆಲ್ ಗಳಲ್ಲಿ ತಿಂಡಿ ಹಾಗೂ ಹಾಲಿನ ದರ ಏರಿಕೆ ಮಾಡಿದರೆ ಸಾಮಾನ್ಯ ಜನರಿಗೆ ಹೊರೆಯಾಗುವುದಿಲ್ಲ. ಸರ್ಕಾರ ಇಂದಿರಾ ಕ್ಯಾಂಟೀನ್ ನಲ್ಲಿ ಕಡಿಮೆ ದರಕ್ಕೆ ಆಹಾರ ಒದಗಿಸುತ್ತಿದೆ. ಹೀಗಾಗಿ ಹೊಟೇಲ್ ನವರಿಗೂ ವೈಜ್ಞಾನಿಕವಾಗಿ ಬೆಂಬಲ ಬೆಲೆಯನ್ನು ಕೊಡಬೇಕು ಎಂದು ಕೋರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


