ಚಾಮರಾಜನಗರ: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೇ ಖಾಕಿ ಬಲೆಗೆ ಈ ಖತರ್ನಾಕ್ ಬಿದ್ದಿದ್ದಾನೆ.
ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸುರೇಶ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ತಮಿಳುನಾಡು ಸತ್ಯಮಂಗಲಂನ ನ್ಯಾಯಾಲಯಕ್ಕೆ ಶುಕ್ರವಾರ ವಿಚಾರಣೆಗೆ ಕರೆದೊಯ್ಯುವಾಗ ಆಸನೂರಿನ ಹೋಟೆಲ್ ಬಳಿ ಪೊಲೀಸರನ್ನು ನೂಕಿ ಪರಾರಿಯಾಗಿದ್ದನು.
ಆ ವೇಳೆ, ಪೊಲೀಸ್ ಸಿಬ್ಬಂದಿಗಳಾದ ಶಿವಾಜಿ ಅವರ ಕಿರುಬೆರಳು ಮುರಿದು, ಕಾಲುಗಳಿಗೆ ಗಾಯವಾಗಿತ್ತು. ವೀರಭದ್ರ ಎಂಬವರಿಗೆ ತರಚಿದ ಗಾಯಗಳಾಗಿತ್ತು. ಪೊಲೀಸರಿಂದ ತಪ್ಪಿಸಿಕೊಂಡ ಈತ ಪೊದೆಗಳ ಒಳಕ್ಕೆ ನುಗ್ಗಿ ಕಣ್ತಪ್ಪಿಸಿಕೊಂಡಿದ್ದ
ಚಾಮರಾಜನಗರದಿಂದ ನಂಜನಗೂಡಿಗೆ ನಿನ್ನೆ ರಾತ್ರಿ ರೈಲಿನಲ್ಲಿ ಹೋಗಿದ್ದ ಈತ ಇಂದು ನಂಜನಗೂಡಿನಿಂದ ವಾಪಾಸ್ ಚಾಮರಾಜನಗರಕ್ಕೆ ಬರುವಾಗ ಮಹಿಳಾ ಬೋಗಿಯನ್ನು ಏರಿ ಪರ್ಸ್ ಕದಿಯಲು ಯತ್ನಿಸಿದಾಗ ಅಲ್ಲೇ ಇದ್ದ ಸಹ ಪ್ರಯಾಣಿಕರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


