ಹಿಟ್ ಆಂಡ್ ರನ್ ಅಪಘಾತಕ್ಕೆ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಎಂಎಸ್ ರಾಮಯ್ಯ ಬಳಿಯ ಇಸ್ರೋ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ.
ರಘು ಮತ್ತು ಚಿರಂಜೀವಿ ಮೃತಪಟ್ಟ ದುರ್ದೈವಿಗಳು. ವಾಸು ಎಂಬವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಬೆಂಗಳೂರಿನ ಕುವೆಂಪು ನಗರದ ನಿವಾಸಿಗಳಾಗಿದ್ದು, ಪುಸ್ತಕ ವ್ಯಾಪಾರ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಹಿಂದಿರುಗುವ ವೇಳೆ ಅಪಘಾತ ನಡೆದಿದೆ.
ಎಂಎಸ್ ರಾಮಯ್ಯ ಅಸ್ಪತ್ರೆ ಕಡೆಯಿಂದ ಬಂದಿದ್ದ ಮಾರುತಿ ಇಕೋ ನಿಂತಿದ್ದ ಕಾರ್ ಮತ್ತು ಆಟೋಗೆ ಡಿಕ್ಕಿ ಹೊಡೆದಿದೆ. ಮೊದಲು ರಸ್ತೆ ಬದಿ ನಿಂತಿದ್ದ ಒರ್ವನಿಗೆ ಹಾಗೂ ಡಿಯೋ ಸ್ಕೂಟರ್ ನಲ್ಲಿದ್ದ ಇಬ್ಬರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಸ್ಥಳೀಯರು ಕಾರ್ ತಡೆದು ನಿಲ್ಲಿಸಿದ್ದು, ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಕಾರ್ ಸಮೇತ ಎಸ್ಕೆಪ್ ಆಗಿದ್ದಾರೆ. ಆಕಾಶ್ ಎಂಬಾತನನ್ನು ಹಿಡಿಯುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದು, ಪೊಲೀಸರ ವಶಕ್ಕೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


