ಬಾಲಕಿ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ ಕಾಮುಕನಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. 12 ವರ್ಷದ ಬಾಲಕಿ, 2020ರ ಫೆ. 9ರಂದು ಬೆಳಿಗ್ಗೆ ತಮ್ಮ ಸಾಕುನಾಯಿ ಜೊತೆ ಮನೆ ಎದುರು ನಿಂತುಕೊಂಡಿದ್ದಳು. ಇದೇ ವೇಳೆ ಆರೋಪಿ ಬಾಲಕಿಯ ಎದುರು ರಹಮತ್-ಉಲ್ಲಾ, ತನ್ನ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ.
ಈತನ ವರ್ತನೆಯಿಂದ ಹೆದರಿದ ಬಾಲಕಿ, ಮನೆಯೊಳಗೆ ಹೋಗಿದ್ದಳು. ಆದರೂ ಕಾಮುಕ ಬಿಡದೆ ಬಾಲಕಿಯನ್ನು ಆತ ಹಿಂಬಾಲಿಸಿದ್ದ ಎನ್ನಲಾಗಿದೆ. ಅದೇ ಸಮಯದಲ್ಲಿ ಬಾಲಕಿಯ ಪೋಷಕರನ್ನು ಕಂಡ ಕಾಮುಕ ಮನೆಯಿಂದ ಓಡಿಹೋಗಿದ್ದ.
ಗಾಬರಿಗೊಂಡಿದ್ದ ಬಾಲಕಿ, ಘಟನೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಳು. ನಂತರ ಪೋಷಕರು ಠಾಣೆಗೆ ಬಂದು ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸ್) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಜಿ. ಪಿ. ರಮೇಶ್, ರಹಮತ್-ಉಲ್ಲಾನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
‘ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಜೊತೆಯಲ್ಲಿ ಗೆ 20 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಜೊತೆಗೆ, ಬಾಲಕಿಗೆ 25 ಸಾವಿರ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ’ ಎಂದು ಪಿ. ಕೃಷ್ಣವೇಣಿ ತಿಳಿಸಿದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಕೃಷ್ಣವೇಣಿ ವಾದಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


