ಗೊರಗುಂಟೆಪಾಳ್ಯ ಬಳಿಯ ಹೊರವರ್ತುಲ ರಸ್ತೆಯಲ್ಲಿ ಬೈಕ್ ಸವಾರರಿಗೆ ಚಾಕು ತೋರಿಸಿ ಮೊಬೈಲ್ ಸುಲಿಗೆ ಮಾಡಿದ್ದ ಅಪರಾಧಿ ಕಾರ್ತಿಕ್ ಕೆ. ಅಲಿಯಾಸ್ ಗುಂಡನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ನಗರದ 51ನೇ ಸಿಸಿಎಚ್ ನ್ಯಾಯಾಲಯು ಆದೇಶ ಹೊರಡಿಸಿದೆ.
2021ರ ಜ. 3ರಂದು ಬೈಕ್ ಸವಾರರಿಬ್ಬರು ಹೊರವರ್ತುಲ ರಸ್ತೆಯಲ್ಲಿ ಹೊರಟಿದ್ದರು. ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿದ್ದ ಸವಾರ, ಮೂತ್ರ ವಿಸರ್ಜನೆಗೆ ಹೋಗಿದ್ದರು. ಹಿಂಬದಿ ಸವಾರ, ಬೈಕ್ ಮೇಲೆ ಕುಳಿತಿದ್ದರು. ಇದೇ ವೇಳೆ ಸ್ಥಳಕ್ಕೆ ಬಂದಿದ್ದ ಕಾರ್ತಿಕ್, ಚಾಕು ತೋರಿಸಿ ಮೊಬೈಲ್ ಕಸಿದುಕೊಂಡಿದ್ದ. ನಂತರ, ಮೂತ್ರ ವಿಸರ್ಜನೆಗೆ ಹೋಗಿದ್ದ ಸವಾರನನ್ನು ಬೆನ್ನಟ್ಟಿ ಹಿಡಿದು ಚಾಕು ತೋರಿಸಿ ಅವರ ಮೊಬೈಲ್ ಸಹ ಸುಲಿಗೆ ಮಾಡಿದ್ದ’ ಎಂದು ಪೊಲೀಸರು ಹೇಳಿದರು.
‘ಸವಾರರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು’ ಎಂದು ತಿಳಿಸಿದರು. ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶ ಸಿ. ಬಿ. ಸಂತೋಷ್ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಬಿ. ಎಚ್. ಭಾಸ್ಕರ್ ವಾದಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


