ಪಕ್ಷದ ಅಲ್ಪಸಂಖ್ಯಾತರ ನಾಯಕರ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಈ ಸಮುದಾಯದ ನಾಯಕರು ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಈ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೇಳಿದ್ದಾರೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಮಾಧ್ಯಮ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ಸರ್ಕಾರ ವಾರ್ಡ್ ಮರುವಿಂಗಡಣೆ ಹೆಸರಲ್ಲಿ ಇವರ ಕ್ಷೇತ್ರಗಳನ್ನು ವಿಭಜಿಸಿ, ಈ ಸಮುದಾಯದವರು ಅವರ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಾಧ್ಯವಾಗದ ರೀತಿಯಲ್ಲಿ ಮಾಡಲಾಗಿತ್ತು. ಆಮೂಲಕ ಅವರ ಮತಗಳನ್ನು ಒಡೆಯುವ ಕೆಲಸ ಮಾಡಲಾಗಿತ್ತು. ಹೀಗಾಗಿ ಅಲ್ಪಸಂಖ್ಯಾತರು ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕೇಳಿದ್ದಾರೆ. ಈ ವಿಚಾರವನ್ನು ಸಮಿತಿಗೆ ಪಾಲಿಕೆ ಚುನಾವಣೆ ಸಮಿತಿ ಮುಂದೆ ಇಡಲಾಗುವುದು. ಅವರ ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಸ್ಥಾನಮಾನ ನೀಡಲಾಗುವುದು.
ಇನ್ನು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಬೇಕು, ಸಂಸತ್ ಚುನಾವಣೆಗೆ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಎಲ್ಲಾರೂ ಒಂದಾಗಿ ಕೆಲಸ ಮಾಡಿ ದೇಶವನ್ನು ರಕ್ಷಣೆ ಮಾಡಬೇಕು. ಇಂಡಿಯಾ ಗೆಲ್ಲಿಸಬೇಕು ಎಂಬುದು ನಮ್ಮೆಲ್ಲರ ಅಜೆಂಡಾ ಆಗಿದೆ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


