ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿರುವ ದುಷ್ಕರ್ಮಿಗಳಿಗೆ ಕಾನೂನು ರೀತಿ ಶಿಕ್ಷೆ ನೀಡಬೇಕೆಂದು ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಕೆ. ಎಂ. ಪಾಲಾಕ್ಷರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು
ಕುಕಿ ಸಮುದಾಯದ ಇಬ್ಬರು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವುದು ಮನುಕುಲವೇ ತಲೆತಗ್ಗಿಸುವಂತಹ ರಾಕ್ಷಸಿ ಕೃತ್ಯವಾಗಿದೆ. ಮಣಿಪುರ ರಾಜ್ಯದ ಮುಖ್ಯಮಂತ್ರಿ ಬೀರೇನ್‌ಸಿಂಗ್ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಅಬ್ದುಲ್ ರೌಫ್, ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ನಾಗೇಶ್ ಎನ್, ರಾಜ್ಯ ಉಪಾಧ್ಯಕ್ಷರಾದ ಎಂ. ಆರ್ ಕೃಷ್ಣಪ್ಪ, ಮಹಿಳೆಯ ಮುಖಂಡರಾದ ಶ್ರೀಮತಿ ವಾಣಿ ಎನ್ ಶೆಟ್ಟಿ ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw


