ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು. ಅವರನ್ನು ಮುಖ್ಯಮಂತ್ರಿ ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದರು.
‘ಕೃಷಿ ಸಚಿವರು, ತಮ್ಮ ಇಲಾಖೆಯ ಅಧಿಕಾರಿಗಳಿಂದ ತಿಂಗಳಿಗೆ ತಲಾ ಕೆ 6ರಿಂದ 8 ಲಕ್ಷ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳು ರಾಜ್ಯಪಾಲರಿಗೂ ದೂರ ನೀಡಿದ್ದಾರೆ. ಅದರಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಪಾಲೆಷ್ಟು ಎಂದು ಜನರು ಕೇಳುವ ಮೊದಲು ಚಲುವರಾಯಸ್ವಾಮಿ ಅವರನ್ನು ತಕ್ಷಣ ವಜಾಗೊಳಿಸಬೇಕು’ ಎಂದು ಆಗ್ರಹಿಸಿದರು.
ಮುಖಂಡರಾದ ಜಗದೀಶ್ ಚಂದ್ರ, ಸಾಮಾಜಿಕ ಜಾಲತಾಣಗಳ ಮುಖ್ಯಸ್ಥ ದರ್ಶನ್ ಜೈನ್ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


