ಮನೆ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಕಳೆದ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಗಿತ್ತು. ಈ ಬಾರಿಯೂ ಅದೇ ಮಾದರಿಯಲ್ಲಿ ಇನ್ನಷ್ಟು ಉತ್ಸಾಹದಿಂದ ಪಕ್ಷಾತೀತವಾಗಿ ಎಲ್ಲರನ್ನೂ ಜೋಡಿಸಬೇಕು ಎಂದು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಅಶ್ವಥ್ ನಾರಾಯಣ ತಿಳಿಸಿದರು.
ದೇಶಭಕ್ತಿಯ ಕುರಿತು ಜಾಥಾ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಗಸ್ಟ್ 13 ರಿಂದಲೇ ನಡೆಸಲು ಉದ್ದೇಶಿಸಲಾಗಿದೆ. ನಮ್ಮ ಮಲ್ಲೇಶ್ವರದ ಎಲ್ಲಾ ಆಟದ ಮೈದಾನಗಳು, ಉದ್ಯಾನವನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ-ಕಾಲೇಜು ಮಕ್ಕಳನ್ನು ಜೋಡಿಸಿಕೊಂಡು ಆಚರಿಸಲು ಸೂಚಿಸಲಾಗಿದೆ.
ಕಳೆದ ಬಾರಿಯ ಧ್ವಜವನ್ನೇ ಮರು ಬಳಕೆ ಮಾಡಲು ಸೂಚಿಸುವ ಜತೆ ಅಗತ್ಯ ಇರುವವರಿಗೆ ಅಂಚೆ ಕಚೇರಿಗಳು ಹಾಗೂ ಸ್ವ ಸಹಾಯ ಸಂಘದ ಸಹೋದರಿಯರು ತಯಾರಿಸಿದ ರಾಷ್ಟ್ರ ಧ್ವಜವನ್ನು ಕೊಂಡುಕೊಳ್ಳುವಂತೆ ತಿಳಿಸಲು ಹೇಳಲಾಯಿತು. ಹಾಗೆಯೇ ಧ್ವಜವನ್ನು ಸುರಕ್ಷಿತವಾಗಿ ಮಡಚಿ ಇಡುವ ಬಗ್ಗೆ ಜನತೆಗೆ ಅರಿವು ಮೂಡಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


