ಬಾಡಿಗೆ ವಿಚಾರದಲ್ಲಿ ಆಟೋ ಚಾಲಕರ ಮಧ್ಯೆ ಮಾತಿಗೆ ಮಾತು ಬೆಳೆದು ಓರ್ವ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದ (Railway Station) ಬಳಿ ಘಟನೆ ಸಂಭವಿಸಿದೆ.
ಆಟೋ ಚಾಲಕ ಫಯಾಜ್ ಖಾನ್ ಮೇಲೆ ಹಲ್ಲೆ ನಡೆಸಲಾಗಿದೆ. ರೈಲ್ವೆ ನಿಲ್ದಾಣದ (Railway Station) ಮುಂದೆ ಆಟೋ ನಿಲ್ಲಿಸಿಕೊಂಡಿದ್ದಾಗ ಮಹಿಳೆಯೊಬ್ಬರು ಕಮಲಾ ನೆಹರೂ ಹಾಸ್ಟೆಲ್ ವರೆಗೆ ಬಿಡುವಂತೆ ಕೇಳಿದ್ದಾರೆ. 40 ರೂ. ಬಾಡಿಗೆ ನೀಡುವಂತೆ ಫಯಾಜ್ ಖಾನ್ ತಿಳಿಸಿದ್ದಾರೆ. ಆಗ ಅಲ್ಲಿಯೇ ಇದ್ದ ಇತರೆ ನಾಲ್ವರು ಆಟೋ ಚಾಲಕರು ಆಕ್ರೋಶಗೊಂಡು, ಫಯಾಜ್ ಖಾನ್ ನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಮೂಗು, ಕಣ್ಣಿನ ಭಾಗಕ್ಕೆ ಗಾಯವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಇತರೆ ಆಟೋ ಚಾಲಕರು ಗಲಾಟೆ ಬಿಡಿಸಿದ್ದು ಫಯಾಜ್ ಖಾನ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬೆದರಿಕೆ ಹಾಕಿ, ಹಲ್ಲೆ ನಡೆಸಿದ ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಫಯಾಜ್ ಖಾನ್ ಜಯನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


