ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತಳನ್ನು ಸರಿತಾ(35) ಎಂದು ಗುರುತಿಸಲಾಗಿದೆ. ತಾರಾನಾಥ್ ಕೊಲೆಗೈದ ಆರೋಪಿ.
ಪತ್ನಿ ಸರಿತಾಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಹತ್ಯೆಗೈದಿರುವ ಪತಿ ತಾರಾನಾಥ್ ವೈಟ್ ಫೀಲ್ಡ್ ಠಾಣೆಗೆ ಬಂದು ಶರಣಾಗಿದ್ದಾನೆ. ಮೂಲತಃ ಮಂಗಳೂರಿನವರಾದ ಈ ದಂಪತಿ ಬೆಂಗಳೂರಿನಲ್ಲಿ ನೆಲೆಸಿ, ಪಾನೀಪುರಿ ಅಂಗಡಿ ನಡೆಸುತ್ತಿದ್ದರು. ಭಾನುವಾರ ಸಂಜೆ ಪತ್ನಿಯನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ತಾರಾನಾಥ್ ಧೈರ್ಯ ಸಾಲದೇ ಪೊಲೀಸರಿಗೆ ಶರಣಾಗಿದ್ದಾನೆ.
ಸರಿತಾ ವಿರುದ್ಧ ಈ ಹಿಂದೆ ಮಂಗಳೂರಿನ ಮೂಲ್ಕಿ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. “ಪರಿಚಿತರು ಪತ್ನಿಯನ್ನು ಕಳ್ಳಿ ಕಳ್ಳಿ ಎನ್ನುತ್ತಿದ್ದರು. ಇದನ್ನು ಸಹಿಸಲಾರದೇ ಪತ್ನಿಯನ್ನು ಹತ್ಯೆಗೈದಿರುವುದಾಗಿ ಆರೋಪಿ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ. ವೈಟ್ ಫೀಲ್ಡ್ ಠಾಣಾ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


